ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಯುಕ್ತರಿಂದ ಪ್ರಾಚಾರ್ಯರ ಸಭೆ

Last Updated 24 ಏಪ್ರಿಲ್ 2013, 20:23 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಲೇಜು ವಿದ್ಯಾರ್ಥಿಗಳೂ ಸೇರಿದಂತೆ ಎಲ್ಲ ವಿದ್ಯಾವಂತರು ಪಾಲ್ಗೊಂಡು ಮತದಾನ ಮಾಡುವಂತೆ ಪ್ರೇರೇಪಿಸಲು ನಗರ ಜಿಲ್ಲಾ ಮುಖ್ಯ ಚುನಾವಣಾಧಿಕಾರಿಗಳೂ ಆಗಿರುವ ಬಿಬಿಎಂಪಿ ಆಯುಕ್ತ ಸಿದ್ದಯ್ಯ ಬುಧವಾರ ಪದವಿ ಕಾಲೇಜು ಪ್ರಾಚಾರ್ಯರ ಸಭೆ ನಡೆಸಿದರು.

`ನಗರ ಪ್ರದೇಶದ ಜನ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುತ್ತಿಲ್ಲ. ಹೀಗಾಗಿ ಅವರಲ್ಲಿ ಜಾಗೃತಿ ಉಂಟು ಮಾಡಬೇಕಿದೆ. ಕಾಲೇಜುಗಳ ವಿದ್ಯಾರ್ಥಿಗಳು ಜಾಗೃತಿ ಆಂದೋಲನದಲ್ಲಿ ಪಾಲ್ಗೊಂಡರೆ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರನ್ನು ತಲುಪಲು ಸಾಧ್ಯ. ಆ ಮೂಲಕ ಮತದಾನದ ಪ್ರಮಾಣವನ್ನು ಹೆಚ್ಚಿಸಲು ಸಾಧ್ಯ' ಎಂದು ಸಿದ್ದಯ್ಯ ಹೇಳಿದರು.

`ಪ್ರಜಾಪ್ರಭುತ್ವವನ್ನು ಬಲಪಡಿಸುವ ಆಯೋಗದ ಪ್ರಯತ್ನಕ್ಕೆ ಕಾಲೇಜುಗಳು ಕೈಜೋಡಿಸಬೇಕು' ಎಂದು ಮನವಿ ಮಾಡಿದರು. `ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನದಲ್ಲಿ ನಗರ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದೆ. ಇಷ್ಟೊಂದು ಜನ ವಿದ್ಯಾವಂತರು ಇದ್ದರೂ ಮತದಾನದಲ್ಲಿ ಮಾತ್ರ ಭಾಗವಹಿಸುತ್ತಿಲ್ಲ.ಇದೊಂದು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ' ಎಂದು ವಿಷಾದ ವ್ಯಕ್ತಪಡಿಸಿದರು.

`ಐಟಿ-ಬಿಟಿ ಕಂಪೆನಿಗಳಲ್ಲಿ ಕೆಲಸ ಮಾಡುವವರನ್ನು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಪ್ರೇರೇಪಿಸಲು ಬೀದಿ ನಾಟಕ ಏರ್ಪಡಿಸಲಾಗುತ್ತಿದೆ. ಕಂಪೆನಿ ಮುಖ್ಯಸ್ಥರ ಮೂಲಕ ಕರಪತ್ರಗಳನ್ನೂ ಹಂಚಲಾಗುತ್ತಿದೆ' ಎಂದು ಹೇಳಿದರು. ತಾಂತ್ರಿಕ ಕಾಲೇಜುಗಳ ಮುಖ್ಯಸ್ಥರೊಂದಿಗೂ ಆಯುಕ್ತರು ಸಭೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT