ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಯುರ್ವೇದ ಆಸ್ಪತ್ರೆ ಕಟ್ಟಡಕೆ ಭೂಮಿಪೂಜೆ

Last Updated 12 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ವಿರಾಜಪೇಟೆ: ಆಯುರ್ವೇದ ಆಸ್ಪತ್ರೆ ನಿರ್ಮಾಣದಿಂದ ತಾಲ್ಲೂಕಿನ ರೋಗಿಗಳಿಗೆ ಅನುಕೂಲವಾಗಲಿದೆ ಎಂದು ವಿಧಾನಸಭಾ ಅಧ್ಯಕ್ಷ ಕೆ.ಜಿ.ಬೋಪಯ್ಯ ಹೇಳಿದರು.

ಕೊಡಗು ಜಿಲ್ಲಾ ಆಯುಷ್ ಇಲಾಖೆ ವತಿಯಿಂದ ಇಲ್ಲಿನ ಸಾರ್ವಜನಿಕ ಆಸ್ಪತ್ರೆಯ ಪಕ್ಕದಲ್ಲಿ ವಿರಾಜಪೇಟೆ ಸರ್ಕಾರಿ ಆಯುಷ್ ಆಸ್ಪತ್ರೆ ಕಟ್ಟಡ ನಿರ್ಮಾಣ ಕಾಮಗಾರಿಗೆ ಬುಧವಾರ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ಆಯುಷ್ ಇಲಾಖೆಯ ಜಿಲ್ಲಾ ವೈದ್ಯಾಧಿಕಾರಿ ತಿಮ್ಮಪ್ಪ ಶೆಟ್ಟ ಮಾತನಾಡಿ ಸುಮಾರು ರೂ. 83ಲಕ್ಷ ವೆಚ್ಚದಲ್ಲಿ ಸುಸಜ್ಜಿತ ಆಯುರ್ವೇದಿಕ್ ಆಸ್ಪತ್ರೆ ನಿರ್ಮಿಸಲಾಗುತ್ತಿದೆ. ಕಟ್ಟಡ ಕಾಮಗಾರಿಗೆ ರೂ 55ಲಕ್ಷ,  ಉಳಿದ ಹಣವನ್ನು ಕ್ರಿಯಾ ಯೋಜನೆಯಂತೆ ಉಪಕರಣಗಳು ಹಾಗೂ ಔಷಧ ಖರೀದಿಗೆ ವ್ಯಯಿಸಲಾಗುವುದು ಎಂದರು.

ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಎಚ್.ಎಂ.ಕಾವೇರಿ, ಜಿಲ್ಲಾ ಪಂಚಾಯಿತಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಕೆ.ಕಾಂತಿ ಬೆಳ್ಳಿಯಪ್ಪ, ಸದಸ್ಯೆ ಮಣಿನಂಜಪ್ಪ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ದಿನೇಶ್, ಆರ್.ಎಂ.ಸಿ. ಅಧ್ಯಕ್ಷ ರಘುನಾಣಯ್ಯ ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಮುರುಳೀಧರ್, ಪಟ್ಟಣ ಪಂಚಾಯಿತಿ ಅಧ್ಯಕ್ಷ ವಿ.ಕೆ,ಸತೀಶ್‌ಕುಮಾರ್ ಇತರರು ಇದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT