ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಯುರ್ವೇದ ಸೀಟು ಲಭ್ಯ: ಭರವಸೆ

Last Updated 18 ಜುಲೈ 2012, 19:30 IST
ಅಕ್ಷರ ಗಾತ್ರ

ಮೈಸೂರು: `ರಾಜ್ಯದ 35 ಆಯುರ್ವೇದ ಕಾಲೇಜುಗಳ ಸೀಟು ಹಂಚಿಕೆಗೆ ಕೇಂದ್ರ ಸರ್ಕಾರದಿಂದ ಅನುಮತಿ ಬರುವುದು ವಿಳಂಬವಾಗಿದೆ. ಆದ್ದರಿಂದ ವಿದ್ಯಾರ್ಥಿಗಳು, ಪೋಷಕರು ಆತಂಕ ಪಡುವ ಅಗತ್ಯವಿಲ್ಲ~ ಎಂದು ವೈದ್ಯಕೀಯ ಶಿಕ್ಷಣ ಸಚಿವ ಎಸ್.ಎ.ರಾಮದಾಸ್ ಹೇಳಿದರು.

`58 ಆಯುರ್ವೇದ ಕಾಲೇಜುಗಳ ಪೈಕಿ 23 ಕಾಲೇಜುಗಳ ಸೀಟು ಹಂಚಿಕೆಗೆ ಮಾತ್ರ ಅನುಮತಿ ದೊರೆತಿದೆ. ಮೂರು ಸರ್ಕಾರಿ ಕಾಲೇಜುಗಳು ಸೇರಿದಂತೆ 35 ಕಾಲೇಜುಗಳ ಪ್ರವೇಶಕ್ಕೆ ಶೀಘ್ರವೇ ಅನುಮತಿ ದೊರಕಲಿದೆ.

ಈಗಾಗಲೇ ಕೇಂದ್ರ ಸರ್ಕಾರದ ಜೊತೆ ಈ ಬಗ್ಗೆ ಮಾತುಕತೆ ನಡೆಸಲಾಗಿದೆ. ಅಕ್ಟೋಬರ್ 31ರ ವರೆಗೆ ಪ್ರವೇಶ ಪಡೆಯಲು ಅವಕಾಶವಿರುವುದರಿಂದ ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗಬಾರದು~ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

`ಈಗಾಗಲೇ ಸೀಟು ಆಯ್ಕೆ ಮಾಡಿಕೊಂಡ ವಿದ್ಯಾರ್ಥಿಗಳು ಸೇರಿದಂತೆ ಎಲ್ಲರಿಗೂ ಮತ್ತೊಮ್ಮೆ ಸೀಟು, ಕಾಲೇಜು ಆಯ್ಕೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗುವುದು. ಎಲ್ಲ 55 ಕಾಲೇಜುಗಳಲ್ಲೂ ವಿದ್ಯಾರ್ಥಿಗಳು ಪ್ರವೇಶ ಪಡೆದುಕೊಳ್ಳಬಹುದಾಗಿದೆ~ ಎಂದು ತಿಳಿಸಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT