ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಯೋಗದ ಪ್ರತಿಕ್ರಿಯೆ ಕೇಳಿದ ‘ಸುಪ್ರೀಂ’

ವಾರ್ಡ್‌ವಾರು ಮತ ಎಣಿಕೆಗೆ ವಿರೋಧ
Last Updated 12 ಮೇ 2014, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ವಾರ್ಡ್‌ವಾರು ಮತ ಎಣಿಕೆ ನಿಲ್ಲಿಸುವಂತೆ ಕೋರಿ ಸಲ್ಲಿಸ­ಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ (ಪಿಐಎಲ್‌) ಸಂಬಂಧಿ­ಸಿ­ದಂತೆ ಸುಪ್ರೀಂಕೋರ್ಟ್‌ ಚುನಾವಣಾ ಆಯೋಗದಿಂದ ಸೋಮವಾರ ಪ್ರತಿಕ್ರಿಯೆ ಕೇಳಿದೆ.

ದೀಪಕ್‌ ಮಿಶ್ರಾ ಮತ್ತು ಎನ್‌.ವಿ. ರಮಣ ಅವರ ನೇತೃತ್ವದ ಸುಪ್ರೀಂ­ಕೋರ್ಟ್‌ ದ್ವಿಸದಸ್ಯ ಪೀಠವು, ಚುನಾವಣಾ ಆಯೋಗಕ್ಕೆ ನೋಟಿಸ್‌ ಜಾರಿ ಮಾಡಿ ಮೇ 21ರ ಒಳಗೆ ಪ್ರತಿಕ್ರಿಯೆ ನೀಡುವಂತೆ ಸೂಚಿಸಿದೆ.

‘ಲೋಕಸಭಾ ಕ್ಷೇತ್ರದ ಫಲಿತಾಂಶವನ್ನು ಒಂದೇ ಬಾರಿಗೆ ಘೋಷಿಸಬೇಕು. ವಾರ್ಡ್‌­ವಾರು ಎಲೆಕ್ಟ್ರಾನಿಕ್‌ ಮತ ಯಂತ್ರವನ್ನು (ಇವಿಎಮ್‌) ಎಣಿಕೆ ಮಾಡ­ಬಾ­ರದು. ಇದರಿಂದ ರಹಸ್ಯ ಮತದಾನದ ಆಶಯವೇ ವಿಫಲವಾದಂತಾ­ಗು­ತ್ತದೆ ಮತ್ತು ರಾಜಕೀಯ ಪಕ್ಷಗಳು ಮತದಾರರಿಗೆ ಕಿರುಕುಳ ನೀಡಬಹುದು’ ಎಂದು ಪಂಜಾಬ್‌ನ ವಕೀಲ ಯೋಗೇಶ್‌ ಗುಪ್ತಾ ಅವರು ಸಲ್ಲಿಸಿರುವ ಪಿಐಎಲ್‌ನಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.

ಲೋಕಸಭಾ ಚುನಾವಣಾ ಫಲಿತಾಂಶಕ್ಕೆ ಕೇವಲ ನಾಲ್ಕು ದಿನಗಳು ಬಾಕಿ ಉಳಿದಿರುವಾಗ ಈ ಪಿಐಎಲ್‌ ಸಲ್ಲಿಸಲಾಗಿದೆ. ಮುಂದಿನ ವಿಚಾರಣೆಯನ್ನು ಮೇ 21ಕ್ಕೆ ಮುಂದೂಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT