ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರೋಗ್ಯ ಕೇಂದ್ರ ನಿರ್ಮಾಣಕ್ಕೆ ಚಾಲನೆ

Last Updated 3 ಜೂನ್ 2011, 9:35 IST
ಅಕ್ಷರ ಗಾತ್ರ

ಶಿಡ್ಲಘಟ್ಟ: ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಐದು ಪ್ರಾಥಮಿಕ ಆರೋಗ್ಯ ಕೇಂದ್ರಗಳ ನೂತನ ಕಟ್ಟಡ ನಿರ್ಮಾಣಕ್ಕೆ ತಲಾ 75 ಲಕ್ಷದಂತೆ ಒಟ್ಟು ರೂ. 3.75 ಕೋಟಿ ಬಿಡುಗಡೆಯಾಗಿದೆ ಎಂದು ಶಾಸಕ ವಿ.ಮುನಿಯಪ್ಪ ತಿಳಿಸಿದರು.

ತಾಲ್ಲೂಕಿನ ಕುಂದಲಗುರ್ಕಿ ಗ್ರಾಮದಲ್ಲಿ ಈಚೆಗೆ ರೂ. 75 ಲಕ್ಷ  ವೆಚ್ಚದ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ, `ಬಹುತೇಕ ಕಡೆ ಅರೋಗ್ಯ ಕೇಂದ್ರಗಳಿಗೆ ಸ್ವಂತ ಕಟ್ಟಡಗಳಿಲ್ಲ. ಈ ಹಿನ್ನೆಲೆಯಲ್ಲಿ ನೂತನ ಕಟ್ಟಡಗಳನ್ನು ನಿರ್ಮಿಸಲಾಗುತ್ತಿದೆ~ ಎಂದರು.

ದಿಬ್ಬೂರಹಳ್ಳಿ, ತಿಮ್ಮಸಂದ್ರ, ಕುಂದಲಗುರ್ಕಿ, ಹೇಮಾರ‌್ಲಹಳ್ಳಿ, ಕೆಂಚಾರ‌್ಲಹಳ್ಳಿಯಲ್ಲಿ ಕಟ್ಟಡಗಳನ್ನು ನಿರ್ಮಿಸಲಾಗುವುದು. ನಿಗದಿತ ಅವಧಿಯಲ್ಲಿ ನೂತನ ಕಟ್ಟಡಗಳ ನಿರ್ಮಾಣಕಾರ್ಯ ಮುಗಿಯಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

`ಕನಿಷ್ಠ 25 ಸಾವಿರ ಜನಸಂಖ್ಯೆಗೆ ಒಂದರಂತೆ ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪಿಸುವ ಉದ್ದೇಶವಿದ್ದು, ಚೀಮಂಗಲ, ಪಲಿಚೇರ್ಲು ಗ್ರಾಮಗಳಲ್ಲಿ ಆಸ್ಪತ್ರೆ ಮಂಜೂರಾತಿಗೆ ಆರೋಗ್ಯ ಸಚಿವ ಹಾಗೂ ಇಲಾಖೆಯ ಆಯುಕ್ತರಿಗೆ ಮನವಿ ಮಾಡಲಾಗಿದೆ ಎಂದು ಅವರು ತಿಳಿಸಿದರು.

ಜಿ.ಪಂ.ಸದಸ್ಯರಾದ ಎಸ್.ಎಂ.ನಾರಾಯಣಸ್ವಾಮಿ, ಕಂಬದಹಳ್ಳಿ ಸತೀಶ್, ಶಿವಲೀಲಾರಾಜಣ್ಣ, ತಾ.ಪಂ. ಅಧ್ಯಕ್ಷ ಬಿ.ಎನ್.ವೇಣುಗೋಪಾಲ್, ಸದಸ್ಯ ನರಸಿಂಹಮೂರ್ತಿ, ಕುಂದಲಗುರ್ಕಿ ಗ್ರಾ.ಪಂ.ಅಧ್ಯಕ್ಷೆ ಸಾವಿತ್ರಮ್ಮ  ಇನ್ನಿತರರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT