ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರೋಗ್ಯ ವಿ.ವಿ.ಗೆ ಸಚಿವ ಖಾದರ್‌ ಸಹೋದರನ ನೇಮಕ

Last Updated 13 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು: ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲ­ಯದ ಸಿಂಡಿಕೇಟ್‌ ಸದಸ್ಯರನ್ನಾಗಿ ಡಾ.ಯು.ಟಿ.ಇಫ್ತಿಕಾರ್‌ ಅವರನ್ನು ನೇಮಕ ಮಾಡಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ.

ಡಾ.ಪ್ರದೀಪ್‌ ಶೆಟ್ಟಿ ಅವರ ರಾಜೀ­ನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್‌ ಸಹೋದರ ಡಾ.ಯು.ಟಿ.ಇಫ್ತಿಕಾರ್‌ ಅವರನ್ನು ನೇಮಕ ಮಾಡಲಾಗಿದೆ.

ವೃತ್ತಿಯಲ್ಲಿ ವೈದ್ಯರಾಗಿರುವ ಇಫ್ತಿಕಾರ್‌ ಅವರು ಮಂಗಳೂರಿನ ಎಂ.ವಿ.ಶೆಟ್ಟಿ ಕಾಲೇಜಿನಲ್ಲಿ ಪ್ರಾಧ್ಯಾ­ಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ವಿಶ್ವವಿದ್ಯಾಲಯದ ಕುಲಪತಿ ಡಾ.ಕೆ.­ಶ್ರೀಪ್ರಕಾಶ್‌ ಅವರು ಮಾಡಿದ್ದ ಶಿಫಾರಸು ಆಧರಿಸಿ ರಾಜ್ಯಪಾಲರು ನೇಮಕ ಮಾಡಿದ್ದಾರೆ ಎಂದು ರಾಜಭವನದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT