ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರೋಗ್ಯ ವೃದ್ಧಿಗೆ ಕ್ರೀಡೆ ಸಹಕಾರಿ

Last Updated 26 ಜನವರಿ 2012, 9:55 IST
ಅಕ್ಷರ ಗಾತ್ರ

ಚಾಮರಾಜನಗರ: ವಿದ್ಯಾರ್ಥಿಗಳ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿಗೆ ಕ್ರೀಡೆ ಸಹಕಾರಿಯಾಗಲಿದೆ ಎಂದು ಹಿರಿಯ ಗಾಂಧಿವಾದಿ ಸಿ.ಪಿ.ಹುಚ್ಚೇಗೌಡ  ತಿಳಿಸಿದರು.

ನಗರದ ಯೂನಿವರ್ಸ್ ಶಾಲೆಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಶಾಲಾ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾ ಟಿಸಿ ಮಾತನಾಡಿದರು. ವಿದ್ಯಾರ್ಥಿಗಳಿಗೆ ಜ್ಞಾನಾರ್ಜನೆ ಎಷ್ಟು ಮುಖ್ಯವೋ, ಕ್ರೀಡೆಯೂ ಅಷ್ಟೇ ಮುಖ್ಯ. ಕ್ರೀಡೆಯಲ್ಲಿ ಭಾಗವಹಿಸುವಂತಹ ಎಲ್ಲ ಕ್ರೀಡಾ ಪಟುಗಳು ಸೋಲು-ಗೆಲುವನ್ನು ಪರಿ ಗಣಿಸದೆ ಕ್ರೀಡಾಸ್ಫೂರ್ತಿಯಿಂದ ಆಟವಾಡಬೇಕು ಎಂದು ತಿಳಿ ಹೇಳಿದರು.

ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷೆ ವಿಜಯಲಕ್ಷ್ಮಿ ಮಾತನಾಡಿ, ಕ್ರೀಡೆಯಿಂದ ವಿದ್ಯಾರ್ಥಿಗಳಲ್ಲಿ ಒಗ್ಗಟ್ಟು ಮೂಡುವುದರ ಜೊತೆಗೆ ಪರಸ್ಪರ ಪ್ರೀತಿ, ವಿಶ್ವಾಸ ಬೆಳೆಯುತ್ತದೆ. ಶಾಲೆ ಯಲ್ಲಿ ನಡೆಯುವಂತಹ ಎ್ಲ್ಲಲ ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ ಶಾಲೆಗೆ ಹಾಗೂ ಪೋಷಕರಿಗೆ ಕೀರ್ತಿ ತರಬೇಕು ಎಂದು ಹೇಳಿದರು. ಶಾಲಾ ಆಡಳಿತ ಮಂಡಳಿ ಕಾರ್ಯದರ್ಶಿ ಸುಬ್ರಹ್ಮಣ್ಯ, ಬಿಎಸ್‌ವಿ ಪ್ರತಿಷ್ಠಾನದ ವೆಂಕಟನಾಗಪ್ಪಶೆಟ್ಟಿ, ರೋಟರಿ ಸಿಲ್ಕ್ ಸಿಟಿ ಅಧ್ಯಕ್ಷ ರವಿಕುಮಾರ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT