ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರೋಪ ಸಾಬೀತಾದರೆ ಕಠಿಣ ಕ್ರಮ: ಆಂಟನಿ

Last Updated 13 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ಕೊಚ್ಚಿ (ಪಿಟಿಐ):ಪತಿ ಮತ್ತು ಹಿರಿಯ ಅಧಿಕಾರಿಗಳು ಕಿರುಕುಳ ನೀಡಿದ ಬಗ್ಗೆ ನೌಕಾಪಡೆ ಅಧಿಕಾರಿಯೊಬ್ಬರ ಪತ್ನಿ ಮಾಡಿರುವ ಆರೋಪ ಸಾಬೀತಾದರೆ ಅಂತಹವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ರಕ್ಷಣಾ ಸಚಿವ ಎ.ಕೆ. ಆಂಟನಿ ಎಚ್ಚರಿಕೆ ನೀಡಿದ್ದಾರೆ.

`ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಅಲ್ಲದೇ ಈ ಬಗ್ಗೆ ತನಿಖೆ ನಡೆಸಲಾಗುವುದು. ಆರೋಪ ಸಾಬೀತಾದಲ್ಲಿ ಸೇವೆಯಿಂದ ವಜಾಗೊಳಿಸುವುದು ಸೇರಿದಂತೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು' ಎಂದು ಹೇಳಿದ್ದಾರೆ.

`ದೂರಿಗೆ ಸಂಬಂಧಿಸಿದಂತೆ ವಿಸ್ತೃತ ವರದಿ ನೀಡುವಂತೆ ನೌಕಾಪಡೆಗೆ ಸೂಚಿಸಲಾಗಿದೆ. ತನಿಖೆ ಇನ್ನೂ ಪೂರ್ಣಗೊಂಡಿಲ್ಲ' ಎಂದು ಶನಿವಾರ ಇಲ್ಲಿ ದಕ್ಷಿಣ ನೌಕಾ ಕಮಾಂಡ್ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರಿಗೆ ತಿಳಿಸಿದರು.

ನೌಕಾಪಡೆ ತನಿಖೆ ನಡೆಸುತ್ತಿರುವ ಇದೇ ಸಂದರ್ಭದಲ್ಲಿ ದೆಹಲಿ ಮತ್ತು ಕೇರಳ ಪೊಲೀಸರು ತನಿಖಾ ಕಾರ್ಯ ಕೈಗೊಂಡಿದ್ದಾರೆ. ಇಂತಹ ಸಮಯದಲ್ಲಿ ಈ ಬಗ್ಗೆ ಹೆಚ್ಚು ಮಾತನಾಡುವುದು ಸೂಕ್ತವಲ್ಲ ಎಂದರು.

`ಏಕಕಾಲದಲ್ಲಿ ಮೂರು ತನಿಖೆಗಳು ಪ್ರಗತಿಯಲ್ಲಿವೆ. ಈ ಬಗ್ಗೆ ಅಂತಿಮ ನಿರ್ಧಾರಕ್ಕೆ ಬರುವುದು ಸರಿಯಲ್ಲ' ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT