ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರೋಪಪಟ್ಟಿ ಸಲ್ಲಿಕೆಗೆ ಅನುಮತಿ ನೀಡಲು ಗಡುವು

Last Updated 24 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: ಲಂಚ ಪ್ರಕರಣ ಮತ್ತು ಅಕ್ರಮ ಆಸ್ತಿ ಸಂಪಾದನೆ ಆರೋಪಕ್ಕೆ ಗುರಿಯಾಗುವ ಅಧಿಕಾರಿಗಳು, ನೌಕರರ ವಿರುದ್ಧ ಆರೋಪಪಟ್ಟಿ ಸಲ್ಲಿಸಲು ಲೋಕಾಯುಕ್ತ ಪೊಲೀಸರು ಪ್ರಸ್ತಾವ ಸಲ್ಲಿಸಿದ ಮೂರು ತಿಂಗಳ ಒಳಗೆ ಕಡ್ಡಾಯವಾಗಿ ಅನುಮತಿ ನೀಡಬೇಕು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಎಸ್.ವಿ.ರಂಗನಾಥ್ ಸರ್ಕಾರದ ಎಲ್ಲ ಇಲಾಖೆಗಳ ಮುಖ್ಯಸ್ಥರಿಗೆ ಸೂಚನೆ ನೀಡಿದ್ದಾರೆ.

ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಪ್ರಕರಣ ಎದುರಿಸುವ ಅಧಿಕಾರಿಗಳು, ನೌಕರರ ವಿರುದ್ಧ ಆರೋಪಪಟ್ಟಿ ಸಲ್ಲಿಸಲು ಸರ್ಕಾರ ಸಕಾಲಕ್ಕೆ ಲೋಕಾಯುಕ್ತ ಪೊಲೀಸರಿಗೆ ಅನುಮತಿ ನೀಡುತ್ತಿಲ್ಲ ಎಂಬ ಆರೋಪ ಹಲವು ದಿನಗಳಿಂದ ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ಆದೇಶ ಹೊರಡಿಸಿರುವ ಮುಖ್ಯ ಕಾರ್ಯದರ್ಶಿಯವರು, ಭ್ರಷ್ಟರ ವಿರುದ್ಧ ಆರೋಪಪಟ್ಟಿ ಸಲ್ಲಿಸಲು ಅನುಮತಿ ನೀಡುವುದಕ್ಕೆ ಮೂರು ತಿಂಗಳ ಗಡುವು ವಿಧಿಸಿದ್ದಾರೆ.

`ಭ್ರಷ್ಟಾಚಾರದಲ್ಲಿ ಭಾಗಿಯಾಗುವ ಸರ್ಕಾರಿ ನೌಕರರ ವಿರುದ್ಧ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಲು ಮೂರು ತಿಂಗಳ ಒಳಗಾಗಿ ಅನುಮತಿ ನೀಡಬೇಕು ಎಂದು ವಿನೀತ್ ನಾರಾಯಣ್ ಮತ್ತು ಇತರರ ವಿರುದ್ಧದ ಪ್ರಕರಣದ ತೀರ್ಪಿನಲ್ಲಿ ಸುಪ್ರೀಂಕೋರ್ಟ್ ಸ್ಪಷ್ಟವಾಗಿ ಹೇಳಿದೆ.
 
ಆದರೆ, ಈ ತೀರ್ಪನ್ನು ಸಕ್ಷಮ ಪ್ರಾಧಿಕಾರಿಗಳು ಸರಿಯಾಗಿ ಪಾಲಿಸುತ್ತಿಲ್ಲ. ಇದರಿಂದಾಗಿ ಲೋಕಾಯುಕ್ತ ಪೊಲೀಸರಿಗೆ ತೊಂದರೆ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಸಕ್ಷಮ ಪ್ರಾಧಿಕಾರಿಗಳೂ ಕಡ್ಡಾಯವಾಗಿ ಮೂರು ತಿಂಗಳ ಗಡುವನ್ನು ಅನುಸರಿಸಬೇಕು~ ಎಂದು ಪತ್ರದಲ್ಲಿ ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT