ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರೋಪಿಗಳ ಮನೆ ಪರಿಶೀಲನೆ

Last Updated 24 ಜನವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ವಿವಿಧ ಅಪರಾಧ ಪ್ರಕರಣಗಳ ಸುಮಾರು 110 ಹಳೆಯ ಆರೋಪಿಗಳ ಮನೆಗಳ ಮೇಲೆ ಕೇಂದ್ರ ವಿಭಾಗದ ಪೊಲೀಸರು ಮಂಗಳವಾರ ದಿಢೀರ್ ದಾಳಿ ನಡೆಸಿ ಪರಿಶೀಲಿಸಿದರು.

ದರೋಡೆ, ವಾಹನ ಕಳವು, ಡಕಾಯಿತಿ ಪ್ರಕರಣಗಳ ಹಳೆಯ ಆರೋಪಿಗಳನ್ನು ಅಶೋಕನಗರ ಠಾಣೆಗೆ ಕರೆತಂದು ಹೆಚ್ಚಿನ ವಿಚಾರಣೆ ನಡೆಸಿ ಬಳಿಕ ವಾಪಸ್ ಕಳುಹಿಸಲಾಯಿತು. ತಪಾಸಣೆ ವೇಳೆ ಆರೋಪಿಗಳ ಭಾವಚಿತ್ರಗಳು ಹಾಗೂ ಅವರ ವಿವರವನ್ನು ಸಂಗ್ರಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿವೇಕನಗರದ ಮದನ್‌ಲಾಲ್ (28), ವಿಲ್ಸನ್‌ಗಾರ್ಡನ್‌ನ ಫೈರೋಜ್ ಪಾಷಾ (28), ಹಲಸೂರುಗೇಟ್ ಠಾಣೆ ವ್ಯಾಪ್ತಿಯ ಸುಬ್ರಮಣಿ (34) ಮತ್ತು ಅಶೋಕನಗರದ ಅಜ್ಮತ್ ಉಲ್ಲಾ ಖಾನ್ ಸೇರಿದಂತೆ ಹಲವು ಪ್ರಮುಖ ಆರೋಪಿಗಳ ವಿಚಾರಣೆ ನಡೆಸಲಾಯಿತು ಎಂದು ಪೊಲೀಸರು ಹೇಳಿದ್ದಾರೆ.

`ಹಳೆಯ ಆರೋಪಿಗಳ ಕಾರ್ಯ ಚಟುವಟಿಕೆಗಳ ಮೇಲೆ ನಿಗಾ ಇಡುವ ಾಗೂ ಆ ಆರೋಪಿಗಳಿಗೆ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗದಂತೆ ಎಚ್ಚರಿಕೆ ನೀಡುವ ಉದ್ದೇಶದಿಂದ ಅವರ ಮನೆಗಳ ಮೇಲೆ ದಿಢೀರ್ ದಾಳಿ ನಡೆಸಿ ಪರಿಶೀಲಿಸಲಾಯಿತು~ ಎಂದು ಕೇಂದ್ರ ವಿಭಾಗದ ಡಿಸಿಪಿ ಡಾ.ಜಿ.ರಮೇಶ್ `ಪ್ರಜಾವಾಣಿ~ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT