ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್‌ಟಿಐ: ರಾಜ್ಯಗಳಿಗೆ ಸೂಚನೆ

Last Updated 9 ಜನವರಿ 2014, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಮಾಹಿತಿ ಹಕ್ಕಿನ ಪ್ರಚಾರಕ್ಕೆ ರಾಜ್ಯ ಸರ್ಕಾರಗಳು ಮಾಡುತ್ತಿರುವ ಕೆಲಸ ಸಾಲದು. ಇನ್ನೂ ಹೆಚ್ಚಿನ ಕೆಲಸ ಮಾಡಬೇಕು ಎಂದು ರಾಜ್ಯ ಸರ್ಕಾರಗಳಿಗೆ ಕೇಂದ್ರ ಕರೆ ನೀಡಿದೆ.

ಆಡಳಿತಕ್ಕೆ ಸಂಬಂಧಿಸಿದ ಮಾಹಿತಿಗಳನ್ನು ಸ್ವಯಂ ಪ್ರೇರಣೆಯಿಂದ ಬಹಿರಂಗಪಡಿಸಬೇಕು. ಮಾಹಿತಿ ಹಕ್ಕು ಕಾಯ್ದೆ ಅಡಿಯಲ್ಲಿ ಇದು ಕಡ್ಡಾಯ. ಆದರೆ ರಾಜ್ಯ ಸರ್ಕಾರಗಳು ಮಾಹಿತಿ ಹಂಚಿಕೊಳ್ಳುವ ವಿಷಯದಲ್ಲಿ ಹಿಂದೇಟು ಹಾಕುತ್ತಿವೆ ಎಂದು ಕೇಂದ್ರ ಸಚಿವ ವಿ. ನಾರಾಯಣಸ್ವಾಮಿ ಹೇಳಿದ್ದಾರೆ.

‘ಮಾಹಿತಿ ಹಕ್ಕು ಕಾಯ್ದೆಯ ಪ್ರಚಾರಕ್ಕೆ ಕೇಂದ್ರ ಸರ್ಕಾರ ಬಹಳಷ್ಟು ಕೆಲಸ ಮಾಡುತ್ತಿದೆ. ಆದರೆ ರಾಜ್ಯ ಸರ್ಕಾರಗಳ ಕೆಲಸ ನಿರೀಕ್ಷಿತ ಮಟ್ಟದಲ್ಲಿ ಇಲ್ಲ. ಹಾಗಾಗಿ ರಾಜ್ಯಗಳು ಹೆಚ್ಚಿನ ಕೆಲಸ ಮಾಡಬೇಕು. ಮಾಹಿತಿಗಳನ್ನು ಸಾರ್ವಜನಿಕವಾಗಿ ಬಹಿರಂಗಪಡಿಸುವ ಮೂಲಕ ಮಾಹಿತಿ ಹಕ್ಕು ಪ್ರಚಾರದಲ್ಲಿ ಸಕ್ರಿಯ ಪಾತ್ರ ವಹಿಸಬೇಕು ಎಂದು ಸಿಬ್ಬಂದಿ, ಸಾರ್ವಜನಿಕ ದೂರುಗಳು ಮತ್ತು ಪಿಂಚಣಿ ಸಚಿವ ನಾರಾಯಣಸ್ವಾಮಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT