ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್‌ಟಿಪಿಎಸ್: 2 ಘಟಕ ಬಂದ್

Last Updated 16 ಜನವರಿ 2012, 19:30 IST
ಅಕ್ಷರ ಗಾತ್ರ

ರಾಯಚೂರು:  ಕಲ್ಲಿದ್ದಲು ಕೊರತೆ ಹಾಗೂ ತಾಂತ್ರಿಕ ಸಮಸ್ಯೆ ಕಾರಣದಿಂದ ವಿದ್ಯುತ್ ಉತ್ಪಾದನೆ ಸ್ಥಗಿತಗೊಳಿಸಿದ್ದ ಆರ್‌ಟಿಪಿಎಸ್‌ನ 6 ಮತ್ತು 8 ಈ ಎರಡು ಘಟಕಗಳಲ್ಲಿ 6ನೇ ಘಟಕವು ಸೋಮವಾರ ಮಧ್ಯಾಹ್ನ ವಿದ್ಯುತ್ ಉತ್ಪಾದನೆ ಆರಂಭಿಸಿತು. ಆದರೆ ಆವಿ ಪೂರೈಸುವ ಕೊಳವೆಯಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡು 2ನೇ ಘಟಕವು ವಿದ್ಯುತ್ ಉತ್ಪಾದನೆ ಸ್ಥಗಿತಗೊಳಿಸಿದೆ.

ಒಟ್ಟು 8 ಘಟಕಗಳಲ್ಲಿ 6 ಘಟಕಗಳು ಸದ್ಯ ವಿದ್ಯುತ್ ಉತ್ಪಾದಿಸುತ್ತಿವೆ. ಸೋಮವಾರ ಇವು 1,200 ಮೆಗಾವಾಟ್ ವಿದ್ಯುತ್ ಉತ್ಪಾದಿಸಿವೆ. 10ರಿಂದ 15 ಸಾವಿರ ಮೆಟ್ರಿಕ್ ಟನ್ ಕಲ್ಲಿದ್ದಲು ಸಂಗ್ರಹ ಇದೆ. ನಿತ್ಯ ಆರೇಳು ರೇಕ್ ಕಲ್ಲಿದ್ದಲು ಪೂರೈಕೆ ಆಗುತ್ತಿದೆ ಎಂದು ಆರ್‌ಟಿಪಿಎಸ್‌ನ ಅಧಿಕಾರಿಗಳು ತಿಳಿಸಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT