ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಶಾ ಕಾರ್ಯಕರ್ತೆಯರ ದೆಹಲಿ ಚಲೋ

Last Updated 20 ನವೆಂಬರ್ 2011, 19:30 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಆಶಾ ಕಾರ್ಯಕರ್ತೆಯರಿಗೆ ಉದ್ಯೋಗ ಭದ್ರತೆ ಒದಗಿಸುವುದು, ಸರ್ಕಾರಿ ಸೌಕರ್ಯಗಳನ್ನು ಕಲ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ `ದೆಹಲಿ ಚಲೋ~ ಕಾರ್ಯಕ್ರಮದ ಅಂಗವಾಗಿ ಸಿಐಟಿಯು ಆಶಾ ಕಾರ್ಯಕರ್ತೆಯರ ಸಂಘದ ಸದಸ್ಯೆಯರು ಭಾನುವಾರ ನವದೆಹಲಿಗೆ ಪ್ರಯಾಣ ಬೆಳೆಸಿದರು.

ನಗರದ ಉಪವಿಭಾಗಾಧಿಕಾರಿ ಕಚೇರಿ ಎದುರು ಕೆಲ ಹೊತ್ತು ಪ್ರತಿಭಟನೆ ನಡೆಸಿ, ಬೆಂಗಳೂರಿಗೆ ತೆರಳಿದರು. `ಬೇಡಿಕೆಗಳು ಈಡೇರುವವರೆಗೆ ಹೋರಾಟ ಕೈಬಿಡುವುದಿಲ್ಲ. ಬೇಡಿಕೆ ಈಡೇರಿಕೆಗೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು~ ಎಂದರು.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಲಕ್ಷ್ಮಿದೇವಮ್ಮ ಮಾತನಾಡಿ, `ಜಿಲ್ಲೆಯಿಂದ ಒಟ್ಟು 300 ಆಶಾ ಕಾರ್ಯಕರ್ತೆಯರು, ರಾಜ್ಯದಿಂದ ಒಂದು ಸಾವಿರಕ್ಕೂ ಹೆಚ್ಚು ಮಂದಿ ದೆಹಲಿ ಚಲೋದಲ್ಲಿ ಭಾಗವಹಿಸಲಿದ್ದಾರೆ. ನವದೆಹಲಿಯ ಜಂತರ್ ಮಂತರ್ ಆವರಣದಲ್ಲಿ ಪ್ರತಿಭಟನೆ ನಡೆಸಲಾಗುವುದು~ ಎಂದು ಹೇಳಿದರು.

ಸಂಘದ ತಾಲ್ಲೂಕು ಘಟಕದ ಅಧ್ಯಕ್ಷೆ ಶೋಭಾ ಮಾತನಾಡಿ, `ಚಿಕ್ಕಬಳ್ಳಾಪುರ ತಾಲ್ಲೂಕಿನಿಂದ ಒಟ್ಟು 46 ಆಶಾ ಕಾರ್ಯಕರ್ತೆಯರು ಪ್ರತಿಭಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ದಿಬ್ಬೂರು, ನಾಯನಹಳ್ಳಿ, ಮುದ್ದೇನಹಳ್ಳಿ, ನಂದಿ, ಮಂಡಿಕಲ್, ಪೆರೇಸಂದ್ರ, ಶಿಡ್ಲಘಟ್ಟ ತಾಲ್ಲೂಕಿನ ಸಾದಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆಶಾ ಕಾರ್ಯಕರ್ತೆಯರು ಪಾಲ್ಗೊಳ್ಳಲಿದ್ದಾರೆ~ ಎಂದರು.

ಮಂಗಳವಾರ ಪ್ರತಿಭಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ವಿವಿಧ ರಾಜ್ಯಗಳಿಂದ ಆಶಾ ಕಾರ್ಯಕರ್ತೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಿಐಟಿಯು ಮುಖಂಡ ಬಿ.ಎನ್. ಮುನಿಕೃಷ್ಣಪ್ಪ ತಿಳಿಸಿದರು.

ಸಂಘದ ಪದಾಧಿಕಾರಿಗಳಾದ ಚಂದ್ರಕಲಾ, ಗಾಯತ್ರಿ, ಆಂಜನಮ್ಮ, ಪವಿತ್ರಾ, ರಾಧಾ, ಆರತಿ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT