ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಶಾ ಕಾರ್ಯಕರ್ತೆಯರ ಪ್ರತಿಭಟನೆ

Last Updated 19 ಡಿಸೆಂಬರ್ 2012, 8:18 IST
ಅಕ್ಷರ ಗಾತ್ರ

ಮುಂಡರಗಿ:  ಆರೋಗ್ಯ ಇಲಾಖೆಯಲ್ಲಿ ಕಾರ್ಯ ನಿರ್ವ ಹಿಸುತ್ತಿರುವ ಆಶಾಕಾರ್ಯಕರ್ತೆಯರಿಗೆ ನಿಗದಿತ ಮಾಸಿಕ ವೇತನ ಜಾರಿ ಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತಾಲ್ಲೂಕು ಆಶಾ ಕಾರ್ಯಕರ್ತೆಯರು ಮಂಗಳ ವಾರ ತಾಲ್ಲೂಕು ಆರೋಗ್ಯಾಧಿಕಾರಿ ಅವರ ಮೂಲಕ ಮುಖ್ಯ ಮಂತ್ರಿ ಹಾಗೂ ಆರೋಗ್ಯ ಸಚಿವರಿಗೆ ಮನವಿ ಸಲ್ಲಿಸಿದರು.

ಹಗಲು ರಾತ್ರಿ ಎನ್ನದೆ ಪ್ರಾಮಾಣಿಕವಾಗಿ ಬಡ ಜನತೆಯ ಸೇವೆಯಲ್ಲಿ ತೊಡಗಿರುವ ರಾಜ್ಯದ ಸುಮಾರು 30,000 ಆಶಾ ಕಾರ್ಯಕರ್ತೆಯರು ಆರ್ಥಿಕ ಸಂಕಷ್ಟದಲ್ಲಿ ಸಿಲುಕಿದ್ದು, ಸರಕಾರ ತಕ್ಷಣ ಅವರ ನೆರವಿಗೆ ಧಾವಿಸಬೇಕಿದೆ. ಕೇವಲ ಇದೊಂದೆ ಉದ್ಯೋಗವನ್ನು ನಂಬಿಕೊಂಡು ಜೀವನ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು ಜೀವನ ನಿರ್ವಹಿಸಲು ಪರದಾಡ ಬೇಕಾದಂತಹ ಪರಸ್ಥಿತಿ ನಿರ್ಮಾಣವಾಗಿ ಎಂದು ತಿಳಿಸಿದ್ದಾರೆ.

ರಾಜ್ಯ ಘಟಕದ ಕಾರ್ಯದರ್ಶಿ ಡಿ.ನಾಗಲಕ್ಷ್ಮಿ, ಎಐಡಿಎಸ್‌ಒದ ವಿದ್ಯಾರ್ಥಿ ಸಂಘಟನೆಯ ರಾಜ್ಯ ಕಾರ್ಯದರ್ಶಿ ಡಾ.ಎನ್‌ಪ್ರಮೋದ, ತಾಲ್ಲೂಕು ಘಟಕದ ಅಧ್ಯಕ್ಷೆ ಸವಿತಾ ರಾಠೋಡ,  ,ರಾಜೇಶ್ವರಿ ರಾಠೋಡ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT