ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಶಾ ಕಾರ್ಯಕರ್ತೆಯರ ಪ್ರಥಮ ತಾಲ್ಲೂಕು ಸಮಾವೇಶ...

Last Updated 27 ಆಗಸ್ಟ್ 2011, 7:00 IST
ಅಕ್ಷರ ಗಾತ್ರ

ಹೊಸನಗರ: ಗ್ರಾಮದ ಸ್ವಾಸ್ಥ್ಯವನ್ನು ಕಾಪಾಡುವ ಆಶಾ ಕಾರ್ಯಕರ್ತೆಯರಿಗೆ ಮಾಸಿಕ ಗೌರವ ವೇತನ ಹಾಗೂ ಪ್ರೋತ್ಸಾಹಧನ ಹೆಚ್ಚಿಸುವ ನಿಟ್ಟಿನಲ್ಲಿ ಮುಂದಿನ ವಿಧಾನ ಸಭೆಯಲ್ಲಿ ಪ್ರಸ್ತಾಪಿಸುವುದಾಗಿ ಶಾಸಕ ಗೋಪಾಲಕೃಷ್ಣ ಬೇಳೂರು ಭರವಸೆ ನೀಡಿದರು.

ರಾಜ್ಯ ಆಶಾ ಕಾರ್ಯಕರ್ತೆಯರ ಫೆಡರೇಷನ್ ಶುಕ್ರವಾರ ಆಯೋಜಿಸಿದ್ದ ತಾಲ್ಲೂಕು ಆಶಾ ಕಾರ್ಯಕರ್ತೆಯರ ಪ್ರಥಮ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.ಆಶಾ ಕಾರ್ಯಕರ್ತೆಯರಿಗೆ ಕೇಂದ್ರ ಸರ್ಕಾರದಿಂದ ಮಾತ್ರ ಅನುದಾನ ಬಿಡುಗಡೆ ಆಗುತ್ತಿದೆ. ರಾಜ್ಯ ಸರ್ಕಾರ ತಮ್ಮ ಪಾಲು ನೀಡಲು ಸರ್ಕಾರದ ಜತೆ ಚರ್ಚಿಸುತ್ತೇವೆ ಎಂದು ಹೇಳಿದರು.

ಸಮಾವೇಶದ ಅಧ್ಯಕ್ಷತೆ ವಹಿಸಿದ್ದ ಆಶಾ ಕಾರ್ಯಕರ್ತೆಯರ ತಾಲ್ಲೂಕು ಸಮಿತಿ ಅಧ್ಯಕ್ಷೆ ಪೂರ್ಣಿಮಾ ಮಾತನಾಡಿ, ಆಶಾ ಕಾರ್ಯಕರ್ತೆಯರ ಪ್ರಾಮಾಣಿಕ ಬೇಡಿಕೆಯನ್ನು ಈಡೇರಿಸಬೇಕು ಎಂದು ಮನವಿ ಮಾಡಿದರು.

ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಸುಮಾ ಸುಬ್ರಹ್ಮಣ್ಯ, ಸದಸ್ಯೆ ನಿರ್ಮಲಾ ಗಣೇಶ್, ಕರ್ನಾಟಕ ರಾಜ್ಯ ಆಶಾ ಕಾರ್ಯಕರ್ತೆಯರ ಫೆಡರೇಷನ್ ರಾಜ್ಯ ಘಟಕದ ಅಧ್ಯಕ್ಷ ಹೆಚ್.ಕೆ. ರಾಮಚಂದ್ರಪ್ಪ, ತಾಲ್ಲೂಕು ಸಮಿತಿ ಉಪಾಧ್ಯಕ್ಷೆ ನಾಗರತ್ನಾ ಕೋಡೂರು, ಪ್ರಧಾನ ಕಾರ್ಯದರ್ಶಿ ಲಲಿತಾ, ಖಜಾಂಚಿ ಪ್ರಸನ್ನ, ಸಹ ಕಾರ್ಯದರ್ಶಿ ಜಯಶ್ರೀ, ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಯು.ಎಸ್. ಸದಾನಂದ್ ಇದ್ದರು.

ಹೆಣ್ಣ ಭ್ರೂಣ ಹತ್ಯೆ ವಿರೋಧಿಸುವ ಸಮೂಹ ಗೀತೆಯ ಹಾಡಲಾಯಿತು. ಸುಧಾ ಪ್ರಾರ್ಥಿಸಿದರು. ಅಂಜಲಿ ಸ್ವಾಗತಿಸಿದರು. ಸವಿತಾ ಕಾರ್ಯಕ್ರಮ ನಿರೂಪಿಸಿದರು. ಜಯಶ್ರೀ ವಂದಿಸಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT