ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

`ಆಶಾವಾದಿಗಳಾಗಿ ಜೀವನದಲ್ಲಿ ಕನಸು ಕಾಣಿ'

Last Updated 8 ಡಿಸೆಂಬರ್ 2012, 22:00 IST
ಅಕ್ಷರ ಗಾತ್ರ

ಹೊಸಕೋಟೆ: `ಪ್ರತಿ ವಿದ್ಯಾರ್ಥಿ ಆತ್ಮವಿಶ್ವಾಸ ಬೆಳೆಸಿಕೊಂಡು ಆಶಾವಾದಿಗಳಾಗಿ ಜೀವನದಲ್ಲಿ ಕನಸು ಕಾಣಬೇಕು' ಎಂದು ಮಾಜಿ ರಾಷ್ಟ್ರಪತಿ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ಕಿವಿಮಾತು ಹೇಳಿದರು.

ತಾಲ್ಲೂಕಿನ ಕಲ್ಕುಂಟೆ ಗ್ರಾಮದ ರಂಗನಾಥ ಗ್ರಾಮಾಂತರ ಪ್ರೌಢಶಾಲೆಯ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಈಚೆಗೆ ಉದ್ಘಾಟಿಸಿ ಅವರು ಮಾತನಾಡಿದರು.

`ಗುರಿ ಹಾಗೂ ಪರಿಶ್ರಮದ ಮೂಲಕ ಹೆಚ್ಚು ಜ್ಞಾನ ಪಡೆದಾಗ ಮಾತ್ರ ಉನ್ನತ ಹುದ್ದೆಗೆ ಏರಲು ಸಾಧ್ಯ ಎಂಬುದನ್ನು ವಿದ್ಯಾರ್ಥಿಗಳು ಅರಿಯಬೇಕು. ಪ್ರತಿ ವಿದ್ಯಾರ್ಥಿಯು ಸಮಯಕ್ಕೆ ಅಧಿಕ ಮಹತ್ವ ಕೊಡಬೇಕು. ಐವರು ಅನಕ್ಷರಸ್ಥರನ್ನು ಅಕ್ಷರಸ್ಥರನ್ನಾಗಿ ಮಾಡಲು ಮುಂದಾಗಬೇಕು' ಎಂದರು.

ಸಚಿವ ಬಿ.ಎನ್.ಬಚ್ಚೇಗೌಡ ಮಾತನಾಡಿ, `ಮುಂದಿನ ಶೈಕ್ಷಣಿಕ ವರ್ಷದಿಂದ ಶಾಲೆಯಲ್ಲಿ ಪದವಿಪೂರ್ವ ಕಾಲೇಜು ಆರಂಭಿಸಲು ಅನುಮತಿ ನೀಡಲಾಗುವುದು' ಎಂದು ಭರವಸೆ ನೀಡಿದರು. ರಕ್ಷಣಾ ಸಚಿವಾಲಯದ ನಿವೃತ್ತ ಸಲಹೆಗಾರ ಡಾ.ವಿ.ಕೆ.ಅತ್ರೆ, ಜಿ.ಪಂ. ಅಧ್ಯಕ್ಷ ತಿರುವರಂಗ ನಾರಾಯಣಸ್ವಾಮಿ, ಸತ್ಯಸಾಯಿ ಸೇವಾಶ್ರಮದ ಮಾಜಿ ಸಂಚಾಲಕ ಬಿ.ಎನ್.ನರಸಿಂಹಮೂರ್ತಿ, ಶಾಲೆಯ ಅಧ್ಯಕ್ಷ ಎಚ್.ಎಸ್.ಬಸವರಾಜು ಉಪಸ್ಥಿತರಿದ್ದರು.

ಈ ಸಂದರ್ಭ ರಂಗನಾಥ ಪ್ರೌಢ ಶಾಲೆಯ ಸ್ಮರಣ ಸಂಚಿಕೆಯನ್ನು ಬಿಡುಗಡೆ ಮಾಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT