ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಶ್ರಮ ಶಾಲೆ ಮುಚ್ಚದಿರಲು ಆಗ್ರಹ

Last Updated 11 ಜುಲೈ 2012, 19:30 IST
ಅಕ್ಷರ ಗಾತ್ರ

ಹಾಸನ:`ಹಕ್ಕಿಪಿಕ್ಕಿ ಜನಾಂಗದ ಮಕ್ಕಳಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಸಮೀಪದ ಅಂಗಡಿಹಳ್ಳಿಯಲ್ಲಿ ನಿರ್ಮಿಸಿರುವ ಆಶ್ರಮ ಶಾಲೆಯನ್ನು ಮುಚ್ಚಲು ಸಮಾಜ ಕಲ್ಯಾಣ ಇಲಾಖೆ ಮುಂದಾಗಿದ್ದು, ಇದರಿಂದ ಸಮಾಜದ ಅಭಿವೃದ್ಧಿಗೆ ಹಿನ್ನಡೆಯಾಗುತ್ತದೆ.

ಈ ಶಾಲೆಯನ್ನು ಉಳಿಸಿಕೊಡಬೇಕು~ ಎಂದು ಆಗ್ರಹಿಸಿ ಶಾಲೆಯ ವಿದ್ಯಾರ್ಥಿಗಳು ಹಾಗೂ ಸ್ಥಳೀಯ ಹಕ್ಕಿಪಿಕ್ಕಿ ಜನಾಂಗದ ಪ್ರತಿನಿಧಿಗಳು ಬುಧವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಹದಿನಾರು ವರ್ಷಗಳಿಂದ ಇಲ್ಲಿ ಶಾಲೆ ನಡೆಯುತ್ತಿದೆ. ಸುಮಾರು 70 ವಿದ್ಯಾರ್ಥಿಗಳಿದ್ದಾರೆ. ಹಕ್ಕಿಪಿಕ್ಕಿಗಳು ಅಲೆಮಾರಿಗಳಾಗಿದ್ದು, ಪಾಲಕರು ಮಕ್ಕಳನ್ನು ಈ ಆಶ್ರಮ ಶಾಲೆಯಲ್ಲಿ ಬಿಟ್ಟು ಬೇರೆ ಜಿಲ್ಲೆ, ರಾಜ್ಯಗಳಿಗೆ ಉದ್ಯೋಗ ಅರಸಿಕೊಂಡು ಹೋಗಿರುತ್ತಾರೆ.

ಒಮ್ಮೆಲೇ ಈ ಶಾಲೆಯನ್ನು ಮುಚ್ಚಿದರೆ ಈ ಮಕ್ಕಳಿಗೆ ಗತಿಯಾರು? ಎಂದು ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರೂ ಆಗಿದ್ದ ಹೂರಾಜ ನುಡಿದರು.ಮಕ್ಕಳು ಹಾಗೂ ಸಮುದಾಯದ ಹಿರಿಯರು ಸಮಾಜ ಕಲ್ಯಾಣ ಇಲಾಖೆಯ ವಿರುದ್ಧ ಘೋಷಣೆ ಕೂಗಿದರು. ಬಳಿಕ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸುವ ಮನವಿಯನ್ನು ಜಿಲ್ಲಾಧಿಕಾರಿಗೆ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT