ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಸ್ಟ್ರೇಲಿಯಾ: ಭಾರತೀಯ ವಿದ್ಯಾರ್ಥಿಗಳಿಗೆ ಆತಂಕ

Last Updated 3 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಮೆಲ್ಬರ್ನ್/ನವದೆಹಲಿ (ಪಿಟಿಐ): ಗುಣಮಟ್ಟ ಕಾಯ್ದುಕೊಳ್ಳುವಲ್ಲಿ ವಿಫಲವಾಗಿರುವ ಮೂರು ವೃತ್ತಿ ಶಿಕ್ಷಣ ಸಂಸ್ಥೆಗಳನ್ನು ಮುಚ್ಚಲು ಆಸ್ಟ್ರೇಲಿಯಾದಲ್ಲಿ ಆದೇಶಿಸಲಾಗಿದ್ದು, ಈ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 500ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಆತಂಕಗೊಂಡಿದ್ದಾರೆ.

ಈ ಮಧ್ಯೆ, ಭಾರತೀಯ ವಿದ್ಯಾರ್ಥಿಗಳ ಹಿತರಕ್ಷಣೆ ಮಾಡಲಾಗುವುದು ಎಂದು ಭಾರತದಲ್ಲಿ ಆಸ್ಟ್ರೇಲಿಯಾದ ಹೈಕಮಿಷನರ್ ಆಗಿರುವ ಪೀಟರ್ ವರ್ಗೀಸ್ ನವದೆಹಲಿಯಲ್ಲಿ ಭರವಸೆ ನೀಡಿದ್ದಾರೆ.

ವೃತ್ತಿ ಶಿಕ್ಷಣ ಸಂಸ್ಥೆಗಳ ನಿಯಂತ್ರಣ ಪ್ರಾಧಿಕಾರವಾದ `ಆಸ್ಟ್ರೇಲಿಯಾ ಕೌಶಲ ಗುಣಮಟ್ಟ ಪ್ರಾಧಿಕಾರ~ (ಎಎಸ್‌ಕ್ಯೂಎ), ವಿಕ್ಟೋರಿಯಾದಲ್ಲಿರುವ ಎರಡು ಮತ್ತು ಸೌತ್ ವೇಲ್ಸ್‌ನಲ್ಲಿನ ಒಂದು ವೃತ್ತಿ ಶಿಕ್ಷಣ ಸಂಸ್ಥೆಗಳನ್ನು ಮುಚ್ಚುವಂತೆ ಆದೇಶಿಸಿದೆ.

ಈ ಆದೇಶವು ಅಕ್ಟೋಬರ್ 30ರಿಂದ ಜಾರಿಗೆ ಬರಲಿದೆ. ಅಷ್ಟರೊಳಗೆ ಈ ಶಿಕ್ಷಣ ಸಂಸ್ಥೆಗಳು ಎಎಸ್‌ಕ್ಯೂಎಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಲು ಅವಕಾಶ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT