ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಸ್ತಿ ವಿವರ ಸಲ್ಲಿಸದ ಶಾಸಕರ ಅನರ್ಹಕ್ಕೆ ಆಗ್ರಹ

Last Updated 6 ಸೆಪ್ಟೆಂಬರ್ 2013, 20:02 IST
ಅಕ್ಷರ ಗಾತ್ರ

ಬೆಂಗಳೂರು: ಆಸ್ತಿ ವಿವರ ಸಲ್ಲಿಸದ ಶಾಸಕರನ್ನು ಅನರ್ಹಗೊಳಿಸಲು ಲೋಕಾಯುಕ್ತ ಕಾಯ್ದೆಗೆ ತಿದ್ದುಪಡಿ ಮಾಡಬೇಕು ಎಂದು ಅರೈಸ್ ಇಂಡಿಯಾ ಫೌಂಡೇಷನ್ ಆಗ್ರಹಿಸಿದೆ.

ಈ ಬಾರಿ 32 ಶಾಸಕರು ಆಸ್ತಿ ವಿವರ ಸಲ್ಲಿಸಿಲ್ಲ. ಆಸ್ತಿ ವಿವರ ಸಲ್ಲಿಸದ ಶಾಸಕ ರನ್ನು ಅನರ್ಹಗೊಳಿಸಲು ಲೋಕಾ ಯುಕ್ತ ಕಾಯ್ದೆಯಲ್ಲಿ ಅವಕಾಶವೇ ಇಲ್ಲ. ಹೀಗಾಗಿ ಇದರ ಲಾಭವನ್ನು ಶಾಸಕರು ಪಡೆದುಕೊಳ್ಳುತ್ತಿದ್ದಾರೆ ಎಂದು ಫೌಂಡೇಷನ್‌ನ ಸಂಸ್ಥಾಪಕ ಅಧ್ಯಕ್ಷ ಡಾ.ಕೋಡೂರು ವೆಂಕಟೇಶ್ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಕರ್ನಾಟಕ ಮುನ್ಸಿಪಲ್ ಕಾಯ್ದೆ ಪ್ರಕಾರ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿ ಗಳು ಸಹ ಆಸ್ತಿ ಘೋಷಿಸಿಕೊಳ್ಳಬೇಕು. ಆಸ್ತಿ ಘೋಷಿಸಿಕೊಳ್ಳದ ಈ ಪ್ರತಿನಿಧಿ ಗಳನ್ನು ಅನರ್ಹಗೊಳಿಸಲು ಅವಕಾಶ ವಿದೆ. ಇದೇ ರೀತಿ ಕಾಯ್ದೆ ಶಾಸಕರಿಗೆ ಅನ್ವಯಿಸುತ್ತಿಲ್ಲ. ಶಾಸಕರು ಮತ್ತು ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳ ನಡುವೆ ತಾರತಮ್ಯ ಸಲ್ಲದು. ಎಲ್ಲ ಜನಪ್ರತಿನಿಧಿಗಳಿಗೂ ಒಂದೇ ರೀತಿಯ ಕಾನೂನು ಜಾರಿಗೊಳಿಸಬೇಕು ಎಂದು ಪ್ರತಿಪಾದಿಸಿದರು.

ಪ್ರಸ್ತುತ ಲೋಕಾಯುಕ್ತ ಕಾಯ್ದೆ ಪ್ರಕಾರ ಆಸ್ತಿ ವಿವರ ಸಲ್ಲಿಸದ ಶಾಸಕರ ಹೆಸರುಗಳನ್ನು ಪತ್ರಿಕೆಯಲ್ಲಿ ಪ್ರಕಟಿಸ ಬಹುದು. ಅದರ ಹೊರತಾಗಿ ಹೆಚ್ಚಿನ ಕಾನೂನು ಕ್ರಮ ಕೈಗೊಳ್ಳಲು ಅವಕಾ ಶವೇ ಇಲ್ಲದಂತಾಗಿದೆ. ಆದ್ದರಿಂದ ಆಸ್ತಿ ವಿವರ ನೀಡದ ಶಾಸಕರನ್ನು ಅನರ್ಹ ಗೊಳಿಸುವಂತೆ ಕೋರಿ ಹೈಕೋರ್ಟ್‌ನಲ್ಲಿ ಶೀಘ್ರ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗುವುದು ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT