ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಸ್ಪತ್ರೆ ಪುನರಾರಂಭಕ್ಕೆ ಒತ್ತಾಯಿಸಿ ಧರಣಿ

Last Updated 1 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಕೋಲಾರ: ನಗರದ ಗಾಂಧಿನಗರದಲ್ಲಿರುವ ಆಸ್ಪತ್ರೆಯನ್ನು ಮತ್ತೆ ಆರಂಭಿಸಬೇಕು ಎಂದು ಒತ್ತಾಯಿಸಿ ಡಿವೈಎಫ್‌ಐ ನೇತೃತ್ವದಲ್ಲಿ ನಾಗರಿಕರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಧರಣಿ ನಡೆಸಿದರು.

40 ವರ್ಷಗಳ ಹಿಂದೆ ಟಿ.ಚೆನ್ನಯ್ಯ ಅವರ ಮುತುವರ್ಜಿಯಿಂದ ಸ್ಥಾಪಿಸಲಾಗಿದ್ದ ಆಸ್ಪತ್ರೆಯನ್ನು ಕಳೆದ 2 ವರ್ಷದಿಂದ ಮುಚ್ಚಲಾಗಿದೆ. ಪರಿಣಾಮ ಗಾಂಧಿನಗರ ಮತ್ತು ಸುತ್ತಮುತ್ತಲ ನಿವಾಸಿಗಳಿಗೆ ಅನಾನುಕೂಲವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸೌಕರ್ಯ ಕಲ್ಪಿಸಿ: ಗಾಂಧಿನಗರದಲ್ಲಿ ಅಪೂರ್ಣವಾಗಿರುವ ಮುಖ್ಯರಸ್ತೆಗಳ ಅಭಿವೃದ್ಧಿ ಕಾಮಗಾರಿಗಳನ್ನು ಕೂಡಲೇ ಶುರು ಮಾಡಬೇಕು. ಪ್ರತಿದಿನ ಚರಂಡಿ, ರಸ್ತೆ, ಕಸದ ತೊಟ್ಟಿಗಳನ್ನು ಸ್ವಚ್ಛಗೊಳಿಸಬೇಕು.

ಆಗಿಂದಾಗ್ಗೆ ಚರಂಡಿ, ಕಸದ ತೊಟ್ಟಿಗಳಿಗೆ ಬ್ಲೀಚಿಂಗ್ ಪೌಡರ್ ಸಿಂಪಡಿಸಬೇಕು ಎಂದು ಇದೇ ಸಂದರ್ಭದಲ್ಲಿ ದೂರಿದರು. ಡಿವೈಎಫ್‌ಐ ಜಿಲ್ಲಾ ಕಾರ್ಯದರ್ಶಿ ಎಂ.ವಿಜಯಕೃಷ್ಣ, ತಾಲ್ಲೂಕು ಕಾರ್ಯದರ್ಶಿ ರಾಮಾಂಜಿ, ತಾಲ್ಲೂಕು ಉಪಾಧ್ಯಕ್ಷ ಕೆ.ವಿ.ಮಂಜುನಾಥ್, ಮುಖಂಡರಾದ ಕೆ.ವಿ.ರಾಜೇಂದ್ರಪ್ರಸಾದ್, ಮಂಜುಳಾ ಕುಮಾರಿ, ನಿರ್ಮಲ, ಮಹೇಶ್ ಕುಮಾರ್, ಬನಹಳ್ಳಿ ನಾಗೇಶ್ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT