ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಸ್ಪತ್ರೆ ವಾಪಸು: ನಿರ್ಧಾರಕ್ಕೆ ಸಂಪುಟ ಉಪ ಸಮಿತಿ ರಚನೆ

Last Updated 19 ಡಿಸೆಂಬರ್ 2012, 19:59 IST
ಅಕ್ಷರ ಗಾತ್ರ

ಬೆಂಗಳೂರು: `ವೈದ್ಯಕೀಯ ಶಿಕ್ಷಣಕ್ಕಾಗಿ ಒದಗಿಸಲಾದ ಆಸ್ಪತ್ರೆಗಳನ್ನು ಮತ್ತೆ ಆರೋಗ್ಯ ಇಲಾಖೆಗೆ ಸೇರ್ಪಡೆ ಮಾಡಿಕೊಳ್ಳುವ ವಿಷಯಕ್ಕೆ ಸಂಬಂಧಿಸಿದಂತೆ ಪರಾಮರ್ಶಿಸಲು ಉಪ ಮುಖ್ಯಮಂತ್ರಿ ಆರ್. ಅಶೋಕ ಅವರ ನೇತೃತ್ವದಲ್ಲಿ ಸಂಪುಟ ಉಪ ಸಮಿತಿ ರಚಿಸಲಾಗಿದೆ' ಎಂದು ಆರೋಗ್ಯ ಸಚಿವ ಅರವಿಂದ ಲಿಂಬಾವಳಿ ತಿಳಿಸಿದರು.

`ಕಾನೂನು ಸಚಿವ ಎಸ್.ಸುರೇಶಕುಮಾರ್, ವೈದ್ಯಕೀಯ ಶಿಕ್ಷಣ ಸಚಿವ ಎಸ್.ಎ. ರಾಮದಾಸ್ ಮತ್ತು ಆರೋಗ್ಯ ಸಚಿವನಾದ ನಾನು ಸಮಿತಿ ಸದಸ್ಯರಾಗಿದ್ದೇವೆ' ಎಂದು ಹೇಳಿದರು. ಈಗಾಗಲೇ ಮೂರು ಆಸ್ಪತ್ರೆಗಳನ್ನು ಮರಳಿ ಪಡೆಯಲಾಗಿದ್ದು, ಮಿಕ್ಕ ಏಳು ಆಸ್ಪತ್ರೆಗಳಿಗೆ ಸಂಬಂಧಿಸಿದಂತೆ ನಿರ್ಧಾರ ಕೈಗೊಳ್ಳಬೇಕಿದೆ ಎಂದು ಮಾಹಿತಿ ನೀಡಿದರು.

`ಡಿ. 21ರಂದು ವೈದ್ಯರು ನಡೆಸಲು ಉದ್ದೇಶಿಸಿರುವ ಮುಷ್ಕರವನ್ನು ಕೈಬಿಟ್ಟು, ಸರ್ಕಾರದ ಜೊತೆ ಮಾತುಕತೆಗೆ ಬರಬೇಕು, ವರ್ಗಾವಣೆಗೆ ಸಂಬಂಧಿಸಿದಂತೆ ಅವರ ಬೇಡಿಕೆಯನ್ನು ಸರ್ಕಾರ ಆಗಲೇ ಈಡೇರಿಸಿದೆ. ಸಂಬಳದ ವಿಷಯವೂ ಚರ್ಚೆಯಲ್ಲಿದೆ. ಯಾವುದೇ ಕಾರಣಕ್ಕೂ ದುಡುಕಿನ ನಿರ್ಧಾರ ಕೈಗೊಳ್ಳಬಾರದು' ಎಂದು ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT