ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಸ್ಪತ್ರೆಗೆ ಬೆಂಕಿ ಹಚ್ಚಿದ್ದ ಶುಶ್ರೂಷಕನಿಗೆ ಜೀವಾವಧಿ ಶಿಕ್ಷೆ

Last Updated 2 ಆಗಸ್ಟ್ 2013, 19:59 IST
ಅಕ್ಷರ ಗಾತ್ರ

ಸಿಡ್ನಿ (ಎಎಫ್‌ಪಿ): ಇಲ್ಲಿನ ಆಸ್ಪತ್ರೆಯಲ್ಲಿ ಉದ್ದೇಶಪೂರ್ವಕವಾಗಿ ಬೆಂಕಿ ಹಚ್ಚಿ, 11 ಜನರ ಸಾವಿಗೆ ಕಾರಣವಾಗಿದ್ದ ವ್ಯಕ್ತಿಯೊಬ್ಬನಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ರೋಜರ್ ಡೀನ್ ಎಂಬ ನರ್ಸ್ 2001ರಲ್ಲಿ ಈ ಕೃತ್ಯ ಎಸಗಿದ್ದ. ವಿಚಾರಣೆ ಸಂದರ್ಭದಲ್ಲಿ ಪೊಲೀಸರ ಎದುರು ತಪ್ಪು ಒಪ್ಪಿಕೊಂಡಿದ್ದ ಆತ, ಕೆಲವು `ದುಷ್ಟ ವಿಚಾರಗಳಿಂದ' ಪ್ರೇರಿತನಾಗಿ ಹಾಗೆ ಮಾಡಿದ್ದಾಗಿ ತಿಳಿಸಿದ್ದ. 

ರೋಜರ್‌ನ ಈ ಕೃತ್ಯ `ಹೇಯ' ಎಂದು ಬಣ್ಣಿಸಿದ ನ್ಯಾಯಾಧೀಶರಾದ ಮೆಗನ್ ಲತಮ್, `ವೃದ್ಧರೇ ಹೆಚ್ಚಿನ ಸಂಖ್ಯೆಯಲ್ಲಿದ್ದ ಆಸ್ಪತ್ರೆಯಲ್ಲಿ ಸಂಭವಿಸಿದ ಅನಾಹುತವು ಕಲ್ಪನೆಗೂ ನಿಲುಕದಂಥದ್ದು' ಎಂದು ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT