ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಸ್ಪತ್ರೆಯಿಂದ ಅಣ್ಣಾ ಹಜಾರೆ ಬಿಡುಗಡೆ

Last Updated 8 ಜನವರಿ 2012, 11:05 IST
ಅಕ್ಷರ ಗಾತ್ರ

ಪುಣೆ, ಮಹಾರಾಷ್ಟ್ರ( ಪಿಟಿಐ): ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರು ಭಾನುವಾರ ಇಲ್ಲಿನ ಆಸ್ಪತ್ರೆಯಿಂದ ಬಿಡುಗಡೆಯಾದರು.

~ನಾನು ಈಗ ಆರೋಗ್ಯವಾಗಿದ್ದೇನೆ. ಆದರೆ, ಸ್ಪಲ್ಪ ನಿತ್ರಾಣವಿದೆ. ಕೆಲವು ದಿನಗಳ ಕಾಲ ವಿಶ್ರಾಂತಿ ತೆಗೆದುಕೊಳ್ಳುವಂತೆ ವೈದ್ಯರು ಸೂಚಿಸಿದ್ದಾರೆ~ ಎಂದು ಅವರು ತಿಳಿಸಿದ್ದಾರೆ.

ಲೋಕಪಾಲ ಮಸೂದೆ ವಿವಾದಕ್ಕೆ ಸಂಬಂಧಿಸಿದಂತೆ ಅವರ ಮುಂದಿನ ಹೆಜ್ಜೆಯ ಬಗ್ಗೆ ವರದಿಗಾರರು ಪ್ರಶ್ನಿಸಿದಾಗ, ಅವರು, ~ನಾನು ಸಂಪೂರ್ಣವಾಗಿ ಗುಣಮುಖವಾದ ನಂತರ ಅದರ ಕುರಿತು ಯೋಚಿಸುತ್ತೇನೆ~ ಎಂದಿದ್ದಾರೆ.

ಇದೇ ಸಂದರ್ಭದಲ್ಲಿ ತಮ್ಮ ತಂಡದಲ್ಲಿನ ಸದಸ್ಯರ ವಿರುದ್ಧ ಎದ್ದಿರುವ ಭ್ರಷ್ಟಾಚಾರ ಆರೋಪಗಳ ಬಗ್ಗೆ  ಕೇಳಿದಾಗ ಅವರು, `ನಾನು ಹತ್ತು ದಿನಗಳ ಕಾಲ ಹೊರಜಗತ್ತಿನೊಂದಿಗೆ ಸಂಪರ್ಕ ಹೊಂದಿರಲಿಲ್ಲ~ ಎನ್ನುತ್ತ ನೇರವಾಗಿ ಉತ್ತರಿಸದೆ ಜಾರಿಕೊಂಡರು.

ಪ್ರಸ್ತುತ ಐದು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಆ ರಾಜ್ಯಗಳಲ್ಲಿನ ಅವರ ಉದ್ದೇಶಿತ ಪ್ರವಾಸ ಕುರಿತು ಕೇಳಿದಾಗ, ~ವೈದ್ಯರು ಕೆಲವು ದಿನಗಳ ಕಾಲ ವಿಶ್ರಾಂತಿ ತೆಗೆದುಕೊಳ್ಳುವಂತೆ ಹೇಳಿದ್ದಾರೆ~ ಎಂದರು. 

ಆರೋಗ್ಯದಲ್ಲಿ ಸಂಪೂರ್ಣ ಸುಧಾರಣೆ ಕಂಡು ಬಂದ ನಂತರ ಅಣ್ಣಾ ಹಜಾರೆ ಅವರು ಭ್ರಷ್ಟಾಚಾರ ವಿರುದ್ಧದ ತಮ್ಮ ಹೋರಾಟಗಳಲ್ಲಿ ಭಾಗವಹಿಸಬಹುದೆಂದು ವೈದ್ಯರು ಅವರಿಗೆ ಸಲಹೆ ನೀಡಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT