ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆ್ಯಷಸ್ ಸರಣಿ 5-0ರಲ್ಲಿ ಗೆಲ್ಲುವ ಗುರಿ: ಜೇಮ್ಸ ಆ್ಯಂಡರ್‌ಸನ್

Last Updated 24 ಜುಲೈ 2013, 19:59 IST
ಅಕ್ಷರ ಗಾತ್ರ

ಲಂಡನ್ (ಐಎಎನ್‌ಎಸ್): ಆ್ಯಷಸ್ ಸರಣಿಯನ್ನು 5-0ರಲ್ಲಿ ಗೆಲ್ಲುವುದು ಇಂಗ್ಲೆಂಡ್ ತಂಡದ ಗುರಿ ಎಂದು ವೇಗಿ ಜೇಮ್ಸ ಆ್ಯಂಡರ್‌ಸನ್ ಅಭಿಪ್ರಾಯ ಪಟ್ಟಿದ್ದಾರೆ.

2006-07ರಲ್ಲಿ ಆಸ್ಟ್ರೇಲಿಯಾದಲ್ಲಿ ಆ್ಯಷಸ್ ಸರಣಿಯನ್ನು 5-0ರಲ್ಲಿ ಸೋತಿದ್ದ ಇಂಗ್ಲೆಂಡ್, ಇದೀಗ ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ. ಪ್ರಸಕ್ತ ಸರಣಿಯಲ್ಲಿ ಇಂಗ್ಲೆಂಡ್ ಈಗಾಗಲೇ 2-0 ಮುನ್ನಡೆ ಸಾಧಿಸಿದೆ.

ಪ್ರಸಕ್ತ ಆ್ಯಷಸ್ ಸರಣಿಯಲ್ಲಿ ಅತಿಹೆಚ್ಚು ವಿಕೆಟ್ ಪಡೆದಿರುವ ಆ್ಯಂಡರ್‌ಸನ್, ಗ್ರೇಮ್ ಸ್ವಾನ್ ಅವರೊಂದಿಗೆ ಜಂಟಿ ಅಗ್ರಸ್ಥಾನದಲ್ಲಿದ್ದಾರೆ.

`ಕಠಿಣ ಪರಿಸ್ಥಿತಿ ಎದುರಾದರೂ ಸಮಾಧಾನದಿಂದ ಆಡುವಲ್ಲಿ ಯಶಸ್ವಿಯಾಗಿದ್ದೇವೆ. ಉತ್ತಮ ಬೌಲಿಂಗ್ ಮೂಲಕ ಎದುರಾಳಿಗಳ ಮೇಲೆ ಒತ್ತಡ ಹೇರಲು ಪ್ರಯತ್ನಿಸಬೇಕಿದೆ. ಉಳಿದಿದ್ದು ನಮ್ಮ ಕೈಯಲ್ಲಿಲ್ಲ' ಎಂದೂ ಆ್ಯಂಡರ್‌ಸನ್ ಅಭಿಪ್ರಾಯ ಪಟ್ಟಿದ್ದಾರೆ ಎಂದು ಗಾರ್ಡಿಯನ್ ಪತ್ರಿಕೆ ವರದಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT