ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂಗ್ಲಿಷ್ ವ್ಯಾಮೋಹ: ಸಚಿವ ವಿಷಾದ

Last Updated 13 ಸೆಪ್ಟೆಂಬರ್ 2011, 8:25 IST
ಅಕ್ಷರ ಗಾತ್ರ

ಉಪ್ಪಿನಂಗಡಿ: `ನಮ್ಮ ಶಿಕ್ಷಣ ವ್ಯವಸ್ಥೆಯ ಇಂಗ್ಲಿಷ್ ವ್ಯಾಮೋಹದಿಂದಾಗಿ ಸಂಸ್ಕಾರ, ಪದ್ಧತಿ ಹಾಳಾಗಿ ಹೋಗಿದೆ. ಇಂಗ್ಲಿಷ್ ಕಲಿಯದಿದ್ದರೆ ಸಾಧ್ಯವೇ ಇಲ್ಲ ಎನ್ನುವ ತಪ್ಪು ಕಲ್ಪನೆ ಎಲ್ಲರನ್ನೂ ಕಾಡುತ್ತಿದೆ. ಇದು ಸರಿಯಲ್ಲ~ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಪಾಲೆಮಾರ್ ಹೇಳಿದರು.

ಉಪ್ಪಿನಂಗಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ನೂತನ ಕೊಠಡಿಗಳ ಉದ್ಘಾಟನೆ ಮತ್ತು ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕರಿಗೆ ಅಭಿನಂದನೆ ಹಾಗೂ ನಿವೃತ್ತಿ ಹೊಂದಿದ ಶಿಕ್ಷಕರ ವಿದಾಯಕೂಟ ಸಮಾರಂಭದಲ್ಲಿ ಅವರು ಮಾತನಾಡಿದರು.

`ಸರ್ಕಾರಿ ಶಾಲೆ, ಕಾಲೇಜು ಬಗ್ಗೆ ಬಹಳಷ್ಟು ಮಂದಿಯಲ್ಲಿ ಕೀಳರಿಮೆ ಇದೆ. ಆದರೆ ಇಂದು ಸರ್ಕಾರಿ ಶಾಲೆ, ಕಾಲೇಜಿನಲ್ಲಿ ಕಲಿತ ಅದೆಷ್ಟೋ ಮಂದಿ ಅಗರ್ಭ ಶ್ರೀಮಂತರಾಗಿದ್ದಾರೆ. ಉನ್ನತ ಸ್ಥಾನದಲ್ಲಿದ್ದಾರೆ.ಇದೆಲ್ಲವನ್ನೂ ಗಮನಿಸಿ ಸರ್ಕಾರ, ಈ ಶಾಲೆಗಳ ಅಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ಕಾರ್ಯರೂಪಕ್ಕೆ ತಂದು ಗುಣಮಟ್ಟದ ಶಿಕ್ಷಣ ನೀಡಲು ಮುಂದಾಗಿದೆ~ ಎಂದರು.

ಸಂಸದ ನಳಿನ್ ಕುಮಾರ್ ಕಟೀಲ್ ಮಾತನಾಡಿ ಇಲ್ಲಿನ ಶಿಕ್ಷಕರೊಬ್ಬರು ರಾಷ್ಟ್ರ ಮಟ್ಟದ ಪ್ರಶಸ್ತಿ ಪಡೆಯುವ ಮೂಲಕ ಶಾಲೆ ರಾಷ್ಟ್ರ ಮಟ್ಟದಲ್ಲಿ ಗುರುತಿಸುವಂತಾಗಿದೆ. ಇಲ್ಲಿನ ವಾತಾವರಣ, ಶಿಕ್ಷಕರ ಸೇವೆ ಮಕ್ಕಳಿಗೆ ಪ್ರೇರಣೆ ಆಗಲಿದೆ. ಈ ಶಾಲೆ ಜಿಲ್ಲೆಯ ಇನ್ನಷ್ಟು ಶಾಲೆಗಳಿಗೆ ಮಾದರಿ ಆಗಲಿ ಎಂದರು.

ಪುತ್ತೂರು ಶಾಸಕಿ ಮಲ್ಲಿಕಾ ಪ್ರಸಾದ್ ಅಧ್ಯಕ್ಷತೆ ವಹಿಸಿದ್ದರು. ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕ ದಿವಾಕರ ಆಚಾರ್ಯ ಅವರನ್ನು ಅಭಿನಂದಿಸಲಾಯಿತು. ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಗೋಪಾಲ ಶೆಟ್ಟಿ ಅವರನ್ನು ಬೀಳ್ಕೊಡಲಾಯಿತು.

ಪುತ್ತೂರು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಶಂಭು ಭಟ್, ಜಿಲ್ಲಾ ಪಂಚಾಯಿತಿ ಸದಸ್ಯ ಕೇಶವ ಗೌಡ, ತಾ.ಪಂ  ಸದಸ್ಯ ಉಮೇಶ್ ಶೆಣೈ, ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಮಚಂದ್ರ ಮಣಿಯಾಣಿ, ದ.ಕ. ಜಿಲ್ಲಾ ವಿದ್ಯಾಂಗ ಉಪ ನಿರ್ದೇಶಕ ನರಸಿಂಹ ಭಟ್, ಅಭಿನಂದನಾ ಸಮಿತಿ ಕಾರ್ಯಾಧ್ಯಕ್ಷ ಸಂಜೀವ ಮಟಂದೂರು, ಕಾಲೇಜಿನ ಪ್ರಭಾರ ಪ್ರಾಚಾರ್ಯ ಇಬ್ರಾಹಿಂ, ಕಾರ‌್ಯದರ್ಶಿ ಹೆಚ್.ಎಸ್. ಕರುಣಾಕರ, ಗುಡ್ಡಪ್ಪ ಬಲ್ಯ ಮಾತನಾಡಿದರು.

ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಶೇಷಶಯನ, ಬೆಳ್ತಂಗಡಿ ಗುರುದೇವ ಕಾಲೇಜಿನ ಪ್ರಾಚಾರ್ಯ ಕೃಷ್ಣಪ್ಪ ಪೂಜಾರಿ, ಕಾರ್ಕಳ ಬೈಲೂರು ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಗೋಪಾಲಕೃಷ್ಣ ಗೋರೆ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ಮತ್ತಿತರರು ಇದ್ದರು.

ಶಾಲಾ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಂದ ಸಾಂಸ್ಕತಿಕ ಕಾರ್ಯಕ್ರಮ ಮತ್ತು ಜಿಲ್ಲೆಯ ಕಲಾವಿದರಿಂದ `ಅತಿಕಾಯ ಮೋಕ್ಷ~ ತಾಳಮದ್ದಲೆ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT