ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂಡಿಯನ್ ಪ್ರೀಮಿಯರ್ ಲೀಗ್: ಮನರಂಜನಾ ತೆರಿಗೆ ರದ್ದು

Last Updated 10 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ರಾಯ್‌ಪುರ (ಪಿಟಿಐ): ತಮ್ಮ ರಾಜ್ಯದಲ್ಲಿ ಕ್ರಿಕೆಟ್‌ಗೆ ಇನ್ನಷ್ಟು ಖ್ಯಾತಿ ಲಭಿಸಬೇಕು ಎನ್ನುವ ಉದ್ದೇಶ ಹೊಂದಿರುವ ಛತ್ತೀಸಗಡ ಸರ್ಕಾರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿಕೆಟ್‌ಗಳಿಗೆ ಮನರಂಜನಾ ತೆರಿಗೆಯನ್ನು ರದ್ದು ಮಾಡಿದೆ.

`ಐಪಿಎಲ್ ಪಂದ್ಯಗಳ ಟಿಕೆಟ್ ಮೇಲಿನ ಮನರಂಜನಾ ತೆರಿಗೆಯನ್ನು ರದ್ದು ಮಾಡಲು ನಿರ್ಧರಿಸಲಾಗಿದೆ. ಮಂಗಳವಾರ ಸಂಜೆ ಸೇರಿದ್ದ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ರಮಣ್ ಸಿಂಗ್ ಈ ತೀರ್ಮಾನ ಕೈಗೊಂಡಿದ್ದಾರೆ' ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಏಪ್ರಿಲ್ 28ರಂದು ಡೆಲ್ಲಿ ಡೇರ್‌ಡೆವಿಲ್ಸ್ ಹಾಗೂ ಪುಣೆ ವಾರಿಯರ್ಸ್ ತಂಡಗಳ ನಡುವೆ ಇಲ್ಲಿ ಮೊದಲ ಪಂದ್ಯ ನಡೆಯಲಿದೆ. ಶಾಹಿದ್ ವೀರ್ ನಾರಾಯಣ ಸಿಂಗ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪಂದ್ಯಗಳು ನಡೆಯಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT