ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂದಿನಿಂದ ಲಯನ್ಸ್ ಸಮ್ಮೇಳನ

Last Updated 5 ಡಿಸೆಂಬರ್ 2012, 19:39 IST
ಅಕ್ಷರ ಗಾತ್ರ

ಬೆಂಗಳೂರು:  ಲಯನ್ಸ್ ಕ್ಲಬ್ ಇಂಟರ್‌ನ್ಯಾಷನಲ್ ವತಿಯಿಂದ `ಭಾರತ, ದಕ್ಷಿಣ ಏಷ್ಯಾ, ಆಫ್ರಿಕಾ ಹಾಗೂ ಮಧ್ಯ ಏಷ್ಯಾದ 40ನೇ ಸಮ್ಮೇಳನ' ಇದೇ 6ರಿಂದ 9ರ ವರೆಗೆ ನಗರದಲ್ಲಿ ನಡೆಯಲಿದೆ.

ಸಮ್ಮೇಳನ ಸಂಘಟನಾ ಸಮಿತಿಯ ಅಧ್ಯಕ್ಷ ವಿ.ವಿ.ಕೃಷ್ಣ ರೆಡ್ಡಿ ಬುಧವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, `ಅರಮನೆಯಲ್ಲಿ ಗುರುವಾರ ಸಂಜೆ 5.30ಕ್ಕೆ ಸಮ್ಮೇಳನದ ಉದ್ಘಾಟನೆ ನಡೆಯಲಿದ್ದು, 32 ರಾಷ್ಟ್ರಗಳ 2,000ಕ್ಕೂ ಅಧಿಕ ಪ್ರತಿನಿಧಿಗಳು ಭಾಗವಹಿಸುವರು. ಲಯನ್ಸ್ ಕ್ಲಬ್‌ನ ವಿವಿಧ ಕಾರ್ಯಕ್ರಮಗಳು ಹಾಗೂ ಭಾರತದಲ್ಲಿ ವಿವಿಧ ಸೇವಾ ಯೋಜನೆಗಳಿಗೆ ಹಣಕಾಸು ನೆರವು ಒದಗಿಸುವ ಬಗ್ಗೆ ಪರಿಶೀಲಿಸಲಾಗುವುದು' ಎಂದರು.

`ಲಯನ್ಸ್ ಕ್ಲಬ್ ನಗರದಲ್ಲಿ ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅಲ್ಲಿಗೆ ಮೂಲಸೌಕರ್ಯ ಒದಗಿಸಲಿದೆ. ಕ್ಲಬ್ ವತಿಯಿಂದ ನಗರದಲ್ಲಿ ಈವರೆಗೆ 50 ಉಚಿತ ಹೃದ್ರೋಗ ಆರೈಕೆ ಕೇಂದ್ರಗಳನ್ನು ಆರಂಭಿಸಲಾಗಿದ್ದು, ಈ ತಿಂಗಳಿನಲ್ಲಿ ಮೂರು ಕೇಂದ್ರಗಳನ್ನು ಆರಂಭಿಸಲಾಗುವುದು' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT