ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂದು ಗಾಂಧಿನಗರ ವಾರ್ಡ್ ಉಪ ಚುನಾವಣೆ

Last Updated 25 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಕಾಂಗ್ರೆಸ್ ಸದಸ್ಯ ನಟರಾಜ್ ಹತ್ಯೆಯಿಂದ ತೆರವಾಗಿರುವ ಬಿಬಿಎಂಪಿಯ ಗಾಂಧಿನಗರ ವಾರ್ಡ್(94)ಗೆ ಭಾನುವಾರ ಬೆಳಿಗ್ಗೆ 7ರಿಂದ ಸಂಜೆ 5 ಗಂಟೆವರೆಗೆ ಮತದಾನ ನಡೆಯಲಿದ್ದು, ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸಲು ಪಾಲಿಕೆ ಅಗತ್ಯ ಕ್ರಮ ಕೈಗೊಂಡಿದೆ.

ಐದು ಪ್ರಮುಖ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಹಾಗೂ ನಾಲ್ವರು ಪಕ್ಷೇತರರೂ ಸೇರಿದಂತೆ ಒಟ್ಟು ಒಂಬತ್ತು ಅಭ್ಯರ್ಥಿಗಳ ರಾಜಕೀಯ ಭವಿಷ್ಯವನ್ನು 24,851 ಮತದಾರರು ನಿರ್ಧರಿಸಲಿದ್ದಾರೆ.

ಒಟ್ಟು 30 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ. ಈ ಪೈಕಿ 14 ಸೂಕ್ಷ್ಮ ಹಾಗೂ 7 ಅತಿ ಸೂಕ್ಷ್ಮ ಮತಗಟ್ಟೆಗಳು ಎಂದು ಗುರುತಿಸಲಾಗಿದೆ. ಚುನಾವಣೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ಸಂಭವಿಸುವುದನ್ನು ತಡೆಯಲು ಹೆಚ್ಚಿನ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ ಎಂದು ಚುನಾವಣಾ ನೋಡಲ್ ಅಧಿಕಾರಿ ಶಂಕರ್ ಪಾಟೀಲ್ `ಪ್ರಜಾವಾಣಿ~ಗೆ ಮಾಹಿತಿ ನೀಡಿದರು.

ಚುನಾವಣಾ ಕಾರ್ಯಕ್ಕೆ ಇಬ್ಬರು ಎಸಿಪಿ, ಒಬ್ಬ ಡಿಸಿಪಿ, ಮೂವರು ಇನ್ಸ್‌ಪೆಕ್ಟರ್‌ಗಳು, 8 ಮಂದಿ ಎಸ್‌ಐಗಳು, 130 ಕಾನ್‌ಸ್ಟೇಬಲ್‌ಗಳು, ಎಎಸ್‌ಐಗಳು ಹಾಗೂ ಮೂರು ತುಕಡಿ ರಾಜ್ಯ ಮೀಸಲು ಪಡೆಯನ್ನು ಬಳಸಿಕೊಳ್ಳಲಾಗುತ್ತಿದೆ. ಒಂದು ಮತಗಟ್ಟೆಗೆ ನಾಲ್ವರು ಸಿಬ್ಬಂದಿಯನ್ನು ಬಳಸಿಕೊಳ್ಳಲಾಗುತ್ತಿದೆ. ಅಲ್ಲದೆ, ಹೆಚ್ಚುವರಿಯಾಗಿ ಪ್ರತಿ ಮತಗಟ್ಟೆಗೆ ಒಬ್ಬ ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ.

ಕಾಂಗ್ರೆಸ್‌ನಿಂದ ಟಿ. ಗೋಪಾಲಕೃಷ್ಣ, ಬಿಜೆಪಿಯಿಂದ ಜಿ. ರಾಮಚಂದ್ರ, ಜೆಡಿಎಸ್‌ನಿಂದ ಪಿ.ಕೆ. ಸುರೇಶ್, ಎಐಎಡಿಎಂಕೆಯಿಂದ ಎಂ.ಪಿ. ಯುವರಾಜ್, ಜೆಡಿಯುನಿಂದ ಎಸ್. ಅಶ್ವತ್ಥನಾರಾಯಣ ಸ್ಪರ್ಧಿಸಿದ್ದರೆ, ಪಕ್ಷೇತರರಾಗಿ ಕೆ. ರಮೇಶ್, ಎಸ್.ಎನ್. ರಮೇಶ್, ಸಿ.ಜಿ.ಕೆ. ರಾಮು ಹಾಗೂ ಅಬ್ದುಲ್ ಗಫಾರ್ ಕಣದಲ್ಲಿದ್ದಾರೆ.

ಫೆ. 29ರಂದು ಗಾಂಧಿನಗರದ ಕಾನಿಷ್ಕ ಹೋಟೆಲ್ ಬಳಿಯ ಬಿಬಿಎಂಪಿ ಬಾಲಕ- ಬಾಲಕಿಯರ ಪ್ರೌಢ ಶಾಲೆಯಲ್ಲಿ ಮತ ಎಣಿಕೆ ನಡೆಯಲಿದೆ. ವಿದ್ಯುನ್ಮಾನ ಮತಯಂತ್ರಗಳನ್ನು ಬಳಸುತ್ತಿರುವುದರಿಂದ ಒಂದು ಅಥವಾ ಒಂದೂವರೆ ಗಂಟೆಯೊಳಗೆ ಫಲಿತಾಂಶ ಪ್ರಕಟವಾಗುವ ಸಾಧ್ಯತೆಇದೆ.

21 ದಾಖಲೆ ತೋರಿಸಿ ಮತ ಚಲಾಯಿಸಬಹುದು: ಮತದಾರರು ಪಾಸ್‌ಪೋರ್ಟ್, ವಾಹನ ಚಾಲನಾ ಪರವಾನಗಿ, ಆದಾಯ ತೆರಿಗೆ ಗುರುತಿನ ಚೀಟಿ, ಕೇಂದ್ರ, ರಾಜ್ಯ ಸರ್ಕಾರಿ ಅಥವಾ ಸಾರ್ವಜನಿಕ ಸ್ವಾಮ್ಯಕ್ಕೆ ಒಳಪಟ್ಟ ಉದ್ದಿಮೆಗಳು ಅಥವಾ ಸ್ಥಳೀಯ ಸಂಸ್ಥೆಗಳ ನೌಕರರಿಗೆ ಭಾವಚಿತ್ರಸಹಿತ ನೀಡಿರುವ ಗುರುತಿನ ಚೀಟಿ, ರಾಷ್ಟ್ರೀಕೃತ ಬ್ಯಾಂಕ್‌ಗಳು/ಅಂಚೆ ಕಚೇರಿ ಮತ್ತು ಕಿಸಾನ್ ಪಾಸ್‌ಬುಕ್ (28-2-2009ಕ್ಕಿಂತ ಹಿಂದೆ ಪಡೆದಿರುವ ಖಾತೆಗಳಿಗೆ ಮಾತ್ರ), ಭಾವಚಿತ್ರ ಹೊಂದಿರುವ ಆಸ್ತಿ/ ಸ್ವತ್ತಿನ ದಾಖಲೆಗಳು ಅಂದರೆ, ಪಟ್ಟಾ ಪುಸ್ತಕ/ ನೋಂದಾಯಿತ ಕ್ರಯ ಪತ್ರ ಸೇರಿದಂತೆ ಒಟ್ಟು 21 ದಾಖಲೆಗಳನ್ನು ತೋರಿಸಿ ಮತ ಚಲಾಯಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT