ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇದು ದಕ್ಷಿಣ ಭಾರತದ ಕುಂಭ ಮೇಳ- ಪೇಜಾವರ ಶ್ರೀ ಬಣ್ಣನೆ

Last Updated 12 ಜನವರಿ 2012, 9:15 IST
ಅಕ್ಷರ ಗಾತ್ರ

ಕೊಪ್ಪಳ: `ಗವಿಮಠದ ಜಾತ್ರಾ ಮಹೋತ್ಸವ, ಇಲ್ಲಿ ಸೇರಿರುವ ಜನ ಸಾಗರ ಕಂಡು ನನಗೆ ಆನಂದ ಹಾಗೂ ಆಶ್ಚರ್ಯ ಆಗಿದೆ. ಇದು ಸಮಾಜದ ಎಲ್ಲ ಜನರನ್ನೂ ಒಗ್ಗೂಡಿಸುವ ಮಹತ್ಕಾರ್ಯ~

ಬುಧವಾರ ಇಲ್ಲಿ ಗವಿಸಿದ್ಧೇಶ್ವರ ಮಠದಲ್ಲಿ ಜಾತ್ರಾ ಮಹೋತ್ಸವದ ಅಂಗವಾಗಿ ಮಹಾ ರಥೋತ್ಸವಕ್ಕೆ ಚಾಲನೆ ನೀಡಿದ ನಂತರ ಉಡುಪಿ ಪೇಜಾವರ ಮಠಾಧೀಶ ವಿಶ್ವೇಶ ತೀರ್ಥ ಸ್ವಾಮೀಜಿ ಸುದ್ದಿಗಾರರ ಜೊತೆ ಮಾತನಾಡಿ ಈ ಅಭಿಪ್ರಾಯ ವ್ಯಕ್ತಪಡಿಸಿದರು.

`ನನ್ನ ಅನುಭವನದಲ್ಲಿ ಇಷ್ಟೊಂದು ಜನ ಒಂದು ಧಾರ್ಮಿಕ ಕಾರ್ಯಕ್ರಮಕ್ಕೆ ಸೇರಿದ್ದು ನೋಡಿಲ್ಲ. ಹರಿದ್ವಾರದ ಕುಂಭಮೇಳ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದೇನೆ. ಆದರೆ, ಇಷ್ಟೊಂದು ಸಂಖ್ಯೆಯಲ್ಲಿ ಜನರು ಒಂದೆಡೆ ಸೇರಿ ಸಂಭ್ರಮಿಸುವುದನ್ನು ನೋಡಿದರೆ ಅಚ್ಚರಿಯಾಗುತ್ತದೆ~ ಎಂದೂ ಹೇಳಿದರು. ಇದೊಂದು ದಕ್ಷಿಣ ಭಾರತದ ಕುಂಭ ಮೇಳ ಎಂಬುದಾಗಿ ನಿಸ್ಸಂಶಯವಾಗಿ ಹೇಳಬಹುದು ಎಂದು ಬಣ್ಣಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT