ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇದೇ 7ರಿಂದ ಭತ್ತದ ಖರೀದಿ ಕೇಂದ್ರ ಆರಂಭ

ಪ್ರಜಾವಾಣಿ ಫಲಶ್ರುತಿ
Last Updated 5 ಡಿಸೆಂಬರ್ 2013, 8:06 IST
ಅಕ್ಷರ ಗಾತ್ರ

ನರಸಿಂಹರಾಜಪುರ: ತಾಲ್ಲೂಕು ಕೇಂದ್ರದ ವ್ಯಾಪ್ತಿಯಲ್ಲಿ ಗೋದಾಮಿನ ಕೊರತೆಯಿಂದಾಗಿ ಭತ್ತ ಖರೀದಿ ಪ್ರಾರಂಭವಾಗದೆ ಎನ್.ಆರ್.ಪುರ ದಿಂದ 45 ಕಿಲೋಮೀಟರ್ ದೂರದ ಲಕ್ಕವಳ್ಳಿಯಲ್ಲಿ ಭತ್ತ ಖರೀದಿ ಕೇಂದ್ರ ಆರಂಭಿಸಿದ್ದರಿಂದ ಈ ಭಾಗದ ಭತ್ತದ ಬೆಳೆಗಾರರಿಗೆ ಆಗುತ್ತಿರುವ ತೊಂದರೆ ಬಗ್ಗೆ ‘ಪ್ರಜಾವಾಣಿ’ ಮಂಗಳವಾರ ‘ಭತ್ತದ ಕಣಜದವರಿಗಿಲ್ಲ ಭತ್ತ ಖರೀದಿ ಕೇಂದ್ರದ ಭಾಗ್ಯ’ ಎಂಬ ಶೀರ್ಷಿಕೆ ಯಡಿ ವಿಸ್ತೃತ ವರದಿ ಪ್ರಕಟಿಸಲಾಗಿತ್ತು.

ಈ ವರದಿ ಬಂದ ಕೂಡಲೇ ಸಮಸ್ಯೆಯ ಕಡೆ ಗಮನಹರಿಸಿದ ತಾಲ್ಲೂಕು ಕಾಂಗ್ರೆಸ್ ಘಟಕದ ಪ್ರಧಾನ ಕಾರ್ಯದರ್ಶಿ ಕೆ.ಎ.ಅಬುಬಕರ್ ತಹಶೀಲ್ದಾರ್ ಜೆ.ಕೃಷ್ಣಮೂರ್ತಿ ಅವರೊಂದಿಗೆ ಚರ್ಚಿಸಿ ಪಟ್ಟಣದ ಹೌಸಿಂಗ್ ಬೋರ್ಡ್‌ ಕಾಲೋನಿಯಲ್ಲಿರುವ ಪಟ್ಟಣ ಪಂಚಾಯಿತಿಯ ಸಮು­ದಾಯ ಭವನದಲ್ಲಿ ಭತ್ತ ಖರೀದಿ ಕೇಂದ್ರದ ಪ್ರಾರಂಭಕ್ಕೆ ಸ್ಥಳ ನಿಗದಿಗೊಳಿಸಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಿಲ್ಲಾ ವ್ಯವಸ್ಥಾಪಕರ ಗಮನಕ್ಕೆ ತಂದಿದ್ದು ಇದೇ 7 ಶನಿವಾರ ಮಧ್ಯಾಹ್ನ ಭತ್ತ ಖರೀದಿ ಕೇಂದ್ರ ಉದ್ಘಾಟನಾ ಸಮಾ­ರಂಭ ನಡೆಯಲಿದೆ. ರೈತರು ಭತ್ತ ಖರೀದಿ ಕೇಂದ್ರದ ಸದುಪಯೋಗ ಪಡಿಸಿ ಕೊಳ್ಳಬೇಕೆಂದು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಭತ್ತದ ಬೆಳೆಗಾರರ ಸಮಸ್ಯೆಗೆ ಸ್ಪಂದಿಸಿದ ಜಿಲ್ಲಾಧಿಕಾರಿ,ಆಹಾರ ಇಲಾ­ಖೆ ಮುಖ್ಯಸ್ಥರು, ತಹಶೀಲ್ದಾರ್ ಹಾಗೂ ತಾಲ್ಲೂಕು ಕಾಂಗ್ರೆಸ್ ಘಟಕದ ಪ್ರಧಾನ ಕಾರ್ಯದರ್ಶಿ ಅವರಿಗೆ ರೈತರು ಅಭಿನಂದಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT