ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇನ್ನೂ ಸಿಗದ ಎಚ್‌ಕೆಡಿಬಿ ಅಧ್ಯಕ್ಷ

Last Updated 16 ಜೂನ್ 2011, 19:30 IST
ಅಕ್ಷರ ಗಾತ್ರ

ಗುಲ್ಬರ್ಗ: ದಲಿತ ನೌಕರನ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಹೈದರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಎಚ್‌ಕೆಡಿಬಿ) ಅಧ್ಯಕ್ಷ ಅಮರನಾಥ ಪಾಟೀಲ ಅವರನ್ನು ಬಂಧಿಸಲು 8ನೇ ದಿನವೂ ಪೊಲೀಸರು ವಿಫಲರಾಗಿದ್ದಾರೆ.

ಪಾಟೀಲ ಬಂಧನದಲ್ಲಿ ಆಗುತ್ತಿರುವ ವಿಳಂಬವನ್ನು ಖಂಡಿಸಿ ಜಿಲ್ಲೆಯ ಹಲವು ದಲಿತ ಹಾಗೂ ಪ್ರಗತಿಪರ ಸಂಘಟನೆಗಳು ಶನಿವಾರ ಪ್ರತಿಭಟನೆಗೆ ಕರೆ ನೀಡಿವೆ. ಪ್ರತಿಭಟನೆ, ಮನವಿ, ಪತ್ರಿಕಾಗೋಷ್ಠಿಗಳ ಮೂಲಕ ಬಂಧನಕ್ಕೆ ಒತ್ತಡಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ.

ಮಂಡಳಿಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರ ಆಪ್ತ ಕಾರ್ಯದರ್ಶಿ ಶ್ರೀಮಂತ ಪಟ್ಟೇದಾರ ಮೇಲೆ ಜೂನ್ 8ರಂದು ಪಾಟೀಲ ಹಾಗೂ ಅವರ ಬೆಂಬಲಿಗರು ಹಲ್ಲೆ ನಡೆಸಿದ್ದರು ಎಂದು ನಗರದ ಸ್ಟೇಷನ್ ಬಜಾರ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಪರಿಶಿಷ್ಟ ಜಾತಿ/ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯಿದೆ ಅಡಿಯಲ್ಲಿ ದೂರು ನೀಡಲಾಗಿದೆ. ದೂರು ದಾಖಲಿಸಿಕೊಳ್ಳುವಲ್ಲಿಯೂ ಪೊಲೀಸರು ವಿಳಂಬ ಮಾಡಿದ್ದಾರೆ ಎಂದು ಸಂಘಟನೆಗಳು  ಆರೋಪಿಸಿದ್ದವು.

 `ಪೊಲೀಸರ ಎರಡು ತಂಡಗಳು ಹೈದರಾಬಾದ್ ಮತ್ತು ಬೆಂಗಳೂರಿನಲ್ಲಿ ಶೋಧ ನಡೆಸುತ್ತಿವೆ. ಶೀಘ್ರದಲ್ಲಿ ಬಂಧಿಸುತ್ತೇವೆ~ ಎಂದು   ಡಿಎಸ್ಪಿ ಸಿ.ಕೆ.ಬಾಬಾ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT