ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇನ್ಫೊಸಿಸ್‌ನಿಂದ ಮತ್ತೊಬ್ಬ ಹಿರಿಯ ಅಧಿಕಾರಿ ನಿರ್ಗಮನ

Last Updated 18 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಇನ್ಫೊಸಿಸ್‌ನಿಂದ ಮತ್ತೊಬ್ಬ ಹಿರಿಯ ಅಧಿಕಾರಿ ಹೊರ­ನಡೆದಿದ್ದಾರೆ. ಆಸ್ಟ್ರೇಲಿಯಾದಲ್ಲಿ ಕಂಪೆನಿಯ ಹೊರಗುತ್ತಿಗೆ(ಬಿಪಿಒ) ಮಾರಾಟ ವಿಭಾಗದ ಮುಖ್ಯ­ಸ್ಥರಾಗಿದ್ದ ಕಾರ್ತಿಕ್‌ ಜಯರಾಮನ್‌ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿ­ದ್ದಾರೆ.

ಮೆಲ್ಬರ್ನ್‌ನಲ್ಲಿ ಆಕ್ಸೆಂಚರ್‌ ಕಂಪೆನಿ  ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ತಿಕ್ ಅಧಿಕಾರ ವಹಿಸಿಕೊಂ­ಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಾರ್ತಿಕ್‌ ರಾಜೀನಾಮೆ ಕುರಿತು ಪ್ರತಿಕ್ರಿಯೆ ಪಡೆಯಲು ಸುದ್ದಿಸಂಸ್ಥೆ ಸಿಬ್ಬಂದಿ ಇನ್ಫೊಸಿಸ್‌ ವಕ್ತಾರರನ್ನು ಸಂಪರ್ಕಿಸಿದಾಗ, ‘ಕಂಪೆನಿಯಿಂದ ಹೊರ­ನಡೆಯುವವರ ಬಗ್ಗೆ ಮತ್ತು ಹೊಸ­ದಾಗಿ ಕಂಪೆನಿಗೆ ಸೇರ್ಪಡೆಗೊ­ಳ್ಳುವವರ ಬಗ್ಗೆ ತಾವು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ, ಈ ಕುರಿತು ಚರ್ಚೆ ಅನಗತ್ಯ’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT