ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇರಾಕ್‌ನಲ್ಲಿ ಸರಣಿ ಬಾಂಬ್ ಸ್ಫೋಟ: 50 ಸಾವು

Last Updated 23 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಬಾಗ್ದಾದ್(ಎಎಫ್‌ಪಿ): ಇರಾಕ್‌ನ ರಾಜಧಾನಿ ಬಾಗ್ದಾದ್‌ನ ವಿವಿಧಡೆ ಉಗ್ರರು ನಡೆಸಿದ ಸರಣಿ ಬಾಂಬ್ ಸ್ಫೋಟ ಹಾಗೂ ಗುಂಡಿನ ದಾಳಿಯಲ್ಲಿ 50ಕ್ಕೂ ಅಧಿಕ ಮಂದಿ ಸತ್ತು, 250  ಜನರು ಗಾಯಗೊಂಡಿದ್ದಾರೆ ಎಂದು ಭದ್ರತಾ ಪಡೆ ಹಾಗೂ ಆಸ್ಪತ್ರೆಯ ಮೂಲಗಳು ತಿಳಿಸಿವೆ.

 ಬಾಗ್ದಾದ್, ಬಬ್ಲಿ ಪ್ರಾಂತ್ಯದ ದಕ್ಷಿಣ ಭಾಗದ ವಿವಿಧ ಪ್ರದೇಶಗಳು, ಸುನ್ನಿ ಸಮುದಾಯದವರು ಹೆಚ್ಚು ಸಂಖ್ಯೆಯಲ್ಲಿರುವ ದಿಯಾಲಾ ಮತ್ತು ಸಾಲಾಹಿದ್ದಿನ್ ಉತ್ತರ ಭಾಗ, ಕುರ್ದಿಸ್ತಾನದ ವಲಯದ ಸ್ವಾಯತ್ತ ಪ್ರದೇಶ ಕಿರ್ಕುಕ್‌ನಲ್ಲಿಯೂ ಸ್ಫೋಟಗಳು ಸಂಭವಿಸಿದೆ.

   ಹಿಂಸಾಚಾರಪೀಡಿತ ಪ್ರದೇಶವಾಗಿರುವ ಕೇಂದ್ರ ಬಾಗ್ದಾದ್‌ನಲ್ಲಿ ಉಗ್ರರು ನಡೆಸಿದ ದಾಳಿಯಲ್ಲಿ 22 ಮಂದಿ ಸತ್ತಿದ್ದಾರೆ ಎಂದು ಅಲ್ಲಿನ ಒಳಾಡಳಿತ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT