ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇರಾನ್ ಅಣ್ವಸ್ತ್ರದಿಂದ ಬೆದರಿಕೆ: ಪೆರಿಸ್

Last Updated 24 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಜೆರುಸಲೇಂ (ಪಿಟಿಐ): ಇರಾನ್‌ನ ಅಣ್ವಸ್ತ್ರ ಕಾರ್ಯಕ್ರಮ ಒಂದು ದೊಡ್ಡ ಬೆದರಿಕೆಯಾಗಿದೆ ಎಂದು ಬಣ್ಣಿಸಿರುವ ಇಸ್ರೇಲ್ ಅಧ್ಯಕ್ಷ ಶಿಮಾನ್ ಪೆರಿಸ್ ಅವರು, ಈ ಯುದ್ಧ ತಂತ್ರಗಾರಿಕೆಯನ್ನು ವಿಫಲಗೊಳಿಸಲು ಸಮಾಲೊಚನಾ ಪಟ್ಟಿಯಲ್ಲಿ ಎಲ್ಲ ತಂತ್ರಗಳು ಇರುವುದಾಗಿ ಹೇಳಿದ್ದಾರೆ.

ಅವರು ಶುಕ್ರವಾರ ಇಲ್ಲಿ ಅಮೆರಿಕದ ಪ್ರಮುಖ ಯಹೂದಿ ಸಂಘಟನೆಗಳ ಅಧ್ಯಕ್ಷರನ್ನುದ್ದೇಶಿಸಿ ಮಾತನಾಡಿ, `ಇರಾನ್ ಅಣ್ವಸ್ತ್ರ ಕಾರ್ಯಕ್ರಮವು ಇಸ್ರೇಲ್‌ಗೆ ಮಾತ್ರವಲ್ಲದೆ, ಇಡೀ ವಿಶ್ವಕ್ಕೆ ಅಪಾಯಕಾರಿ~ ಎಂದು ಅಭಿಪ್ರಾಯಪಟ್ಟಿದ್ದಾರೆ.

`ಇರಾನ್ ಜಾಗತಿಕ ಭಯೋತ್ಪಾದನೆಗೆ ಶಸ್ತ್ರಾಸ್ತ್ರ ಪೂರೈಸುತ್ತಿದೆಯಲ್ಲದೆ, ನೈತಿಕ ಭ್ರಷ್ಟಾಚಾರ ಕೇಂದ್ರವೂ ಆಗಿದೆ~ ಎಂದಿದ್ದಾರೆ.

`ಇಸ್ರೇಲ್ ಯಾವುದೇ ಬಾಹ್ಯ ಬೆದರಿಕೆಯಿಂದ ತನ್ನನ್ನು ರಕ್ಷಿಸಿಕೊಳ್ಳುವ ಹಕ್ಕು ಮತ್ತು ಸಾಮರ್ಥ್ಯ ಹೊಂದಿದೆ~ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT