ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇರಾನ್ ಜತೆ ವ್ಯವಹಾರ: ಭಾರತ ಆಸಕ್ತಿ

Last Updated 9 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಪರಮಾಣು ಬಳಕೆಗೆ ಸಂಬಂಧಿಸಿದಂತೆ ಎದ್ದಿರುವ ವಿವಾದದ ಹಿನ್ನೆಲೆಯಲ್ಲಿ ಇರಾನ್ ಮೇಲೆ ಅಮೆರಿಕ ಮತ್ತು ಐರೋಪ್ಯ ದೇಶಗಳು ನಿರ್ಬಂಧ ವಿಧಿಸಿರುವುದರಿಂದ, ಆ ದೇಶದ ವಿವಿಧ ಕ್ಷೇತ್ರಗಳಲ್ಲಿ ಲಭ್ಯ ಇರುವ ವ್ಯವಹಾರ ಕ್ಷೇತ್ರದಲ್ಲಿ ತನ್ನನ್ನು ತೊಡಗಿಸಿಕೊಳ್ಳಲು ಭಾರತ ಗಮನ ಹರಿಸಿದೆ.

ಅಮೆರಿಕ ಮತ್ತು ಐರೋಪ್ಯ ರಾಷ್ಟ್ರಗಳ ನಿರ್ಬಂಧದ ನಂತರ ಇರಾನ್‌ನ ಹಲವಾರು ಕ್ಷೇತ್ರಗಳು ಬಿಕ್ಕಟ್ಟಿಗೆ ಸಿಲುಕಿವೆ.

ಇಂತಹ ಕ್ಷೇತ್ರಗಳನ್ನು ಗುರುತಿಸಿ ಅವುಗಳನ್ನು ಭಾರತ ಆಯ್ಕೆ ಮಾಡಿಕೊಂಡಿದ್ದು, ಆ ದೇಶದೊಂದಿಗೆ ವ್ಯಾಪಾರ ವೃದ್ಧಿಗೆ ಆದ್ಯತೆ ನೀಡಿದೆ.

ಯಾವ ಯಾವ ಕ್ಷೇತ್ರಗಳಲ್ಲಿ ಹೆಚ್ಚಿನ ಅವಕಾಶ ಇದೆ ಎನ್ನುವುದನ್ನು ಗುರುತಿಸುವ ಸಲುವಾಗಿ ಭಾರತದ ವ್ಯಾಪಾರಿಗಳ ದೊಡ್ಡ ನಿಯೋಗ ಈ ತಿಂಗಳ ಅಂತ್ಯದಲ್ಲಿ ಇರಾನ್‌ಗೆ ಭೇಟಿ ನೀಡಲಿದೆ.

ಭಾರತದ ಉತ್ಪನ್ನಗಳನ್ನು ರಫ್ತು ಮಾಡುವ ಉದ್ದೇಶದಿಂದ ಈ ತಿಂಗಳ ಅಂತ್ಯದ ವೇಳೆಗೆ ದೊಡ್ಡ ನಿಯೋಗವೊಂದನ್ನು ಅಲ್ಲಿಗೆ ಕಳುಹಿಸಲಾಗುವುದು ಎಂದು ವಾಣಿಜ್ಯ ಕಾರ್ಯದರ್ಶಿ ರಾಹುಲ್ ಖುಲ್ಲರ್ ತಿಳಿಸಿದರು.

ನಿಯೋಗದಲ್ಲಿ ವ್ಯಾಪಾರಿಗಳಷ್ಟೇ ಅಲ್ಲದೇ ಅಧಿಕಾರಿಗಳೂ ಇರುತ್ತಾರೆ. ತೈಲ ಆಮದಿಗಾಗಿ ಭಾರತ ಇರಾನ್ ಮೇಲೆ ಹೆಚ್ಚು ಅವಲಂಬಿತವಾಗಿದ್ದು, ಅಮೆರಿಕ ಮತ್ತು ಐರೋಪ್ಯ ರಾಷ್ಟ್ರಗಳ ಆ ದೇಶದ ಮೇಲೆ ನಿರ್ಬಂಧ ವಿಧಿಸಿದರೂ ಸಹ, ಭಾರತ ತನ್ನ ವ್ಯವಹಾರವನ್ನು ವೃದ್ಧಿಸಿಕೊಳ್ಳಲು ಮುಂದಾಗಿದೆ.

ಭಾರತ-ಇರಾಕ್ ಮಧ್ಯೆ ನೇರ ವಿಮಾನಯಾನ

ನವದೆಹಲಿ (ಪಿಟಿಐ): ಎರಡು ದಶಕಗಳ ಹಿಂದೆ ನಡೆದ ಕೊಲ್ಲಿ ಯುದ್ಧದ ಸಂದರ್ಭದಲ್ಲಿ ಸ್ಥಗಿತಗೊಳಿಸಲಾಗಿದ್ದ ಭಾರತ- ಇರಾಕ್ ನಡುವಿನ ನೇರ ವಿಮಾನಯಾನ ಸೌಲಭ್ಯವನ್ನು ಪುನಃ ಆರಂಭಿಸಲು ಎರಡೂ ದೇಶಗಳೂ ಮುಂದಾಗಿವೆ.

ಕಳೆದ ಕೆಲವು ತಿಂಗಳಿನಿಂದ ಈ ವಿಷಯದಲ್ಲಿ ಚರ್ಚೆ ನಡೆಸುತ್ತಿದ್ದ ಉಭಯ ದೇಶಗಳ ವಿಮಾನಯಾನ ಇಲಾಖೆ ಅಧಿಕಾರಿಗಳು ನೇರ ವಿಮಾನಯಾನ ಸೇವೆಯನ್ನು ಆರಂಭಿಸಲು ಒಮ್ಮತಕ್ಕೆ ಬಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT