ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈರುಳ್ಳಿರಫ್ತು

Last Updated 13 ಫೆಬ್ರುವರಿ 2011, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಬಂಪರ್ ಇಳುವರಿ ನಿರೀಕ್ಷೆ ಇರುವ ಹಿನ್ನೆಲೆಯಲ್ಲಿ ಗೋಧಿ ಮತ್ತು ಈರುಳ್ಳಿ ಮೇಲಿನ ರಫ್ತು ನಿಷೇಧ  ತೆಗೆದುಹಾಕುವ ಕುರಿತು ಸರ್ಕಾರ ಚಿಂತನೆ ನಡೆಸುತ್ತಿದ್ದು, ಶೀಘ್ರದಲ್ಲಿಯೇ ಈ ಕುರಿತ ಪ್ರಕಟಣೆ ಹೊರಬೀಳುವ ಸಾಧ್ಯತೆ ಇದೆ.

ಕೇಂದ್ರ ಹಣಕಾಸು ಸಚಿವ ಪ್ರಣವ್ ಮುಖರ್ಜಿ ಅಧ್ಯಕ್ಷತೆಯಲ್ಲಿರುವ ಉನ್ನತ ಅಧಿಕಾರ ಹೊಂದಿರುವ ಸಚಿವರುಗಳ ಸಮಿತಿ (ಇಜಿಒಎಂ) ಇದಕ್ಕೆ ಸಂಬಂಧಿಸಿದಂತೆ ಈ ವಾರಾಂತ್ಯದಲ್ಲಿ ಚರ್ಚೆ ನಡೆಸುವ ಸಾಧ್ಯತೆಗಳಿವೆ ಎಂದು ಕೃಷಿ ಸಚಿವಾಲಯದ ಮೂಲಗಳು ತಿಳಿಸಿವೆ.

ಗೋಧಿ ಉತ್ಪಾದನೆ ಪ್ರಸಕ್ತ ಹಣಕಾಸು ವರ್ಷದಲ್ಲಿ ಸಾರ್ವಕಾಲಿಕ ದಾಖಲೆ  81.47 ದಶಲಕ್ಷ ಟನ್ ತಲುಪುವ ನಿರೀಕ್ಷೆ ಇದೆ. ಈರುಳ್ಳಿ ಪೂರೈಕೆ ಕೂಡ ಗಣನೀಯವಾಗಿ ಹೆಚ್ಚಿದ್ದು, ಈ ಹಿನ್ನೆಲೆಯಲ್ಲಿ ರಫ್ತು ನಿಷೇಧ ತೆರವಿಗೆ ಆಗ್ರಹಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT