ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈಶ್ವರ ದೇವರ ರಥೋತ್ಸವ

Last Updated 22 ಫೆಬ್ರುವರಿ 2012, 9:20 IST
ಅಕ್ಷರ ಗಾತ್ರ

ಶಿಗ್ಗಾವಿ: ಮಾಹಾಶಿವರಾತ್ರಿ ಅಂಗವಾಗಿ ಪಟ್ಟಣದ ಪೇಟೆ ರಸ್ತೆಯಲ್ಲಿರುವ ಈಶ್ವರದೇವರ ರಥೋತ್ಸವ  ಮಂಗಳವಾರ ಸಾವಿರಾರು ಭಕ್ತ ಸಮೂಹದ ನಡುವೆ ಸೆಡಗರ ಸಂಭ್ರಮದಿಂದ ಜರುಗಿತು.

ಬೆಳಿಗ್ಗೆ ಈಶ್ವರದೇವರಿಗೆ ಮಹಾರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆ ಹಾಗೂ ಮಹಾಮಂಗಳಾರತಿ ಹಾಗೂ ನೂರಾರು ಭಕ್ತ ಸಮೂಹದಿಂದ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ನೆರವೇರಿಸಿದರು. ಪಟ್ಟಣದ ಪ್ರಮುಖ ಬೀದಿಯಲ್ಲಿ ರಥೋತ್ಸವ ಸಂಚರಿಸಿತು. ರಥೋತ್ಸವದ ಮೆರವಣಿಗೆಯಲ್ಲಿ ಪುರವಂತರ ಮೇಳ, ಚಾಂಜಮೇಳ. ಡೋಳ್ಳು, ಭಜನೆ ಸೇರಿದಂತೆ ವಿವಿಧ ವಾದ್ಯ ವೈಭವಳೊಂದಿಗೆ ವಿಜೃಂಭಣೆಯಿಂದ ನಡೆಯಿತು.

ಸಂಜೆ ನಡೆದ ಮಹಾರಥೋತ್ಸವಕ್ಕೆ ಗಂಜೀಗಟ್ಟಿಮಠದ ಶಿವಲಿಂಗೇಶ್ವರ ಶಿವಾಚಾರ್ಯ ಸ್ವಾಮೀಜಿ ಚಾಲನೆ ನೀಡಿ, ಮನುಷ್ಯನ ಶಾಂತಿ ನೆಮ್ಮದಿಯ ಬದುಕಿಗೆ ಜಾತ್ರಾ ಮೋಹತ್ಸವಗಳು ಚೈತನ್ಯ ನೀಡುತ್ತಿವೆ. ಅಲ್ಲದೆ ಗ್ರಾಮೀಣ ಭಾಗದ ರೈತ ಸಮೂಹದ ಬದುಕು ಹಸನಾಗಲು ಹಾಗೂ ಮುಂದಿನ ಕೃಷಿ ಚಟುವಟಿಕೆಗಳು ಉತ್ತಮವಾಗಲಿ ಎಂಬ ಆಶೋತ್ತರಗಳನ್ನು ಇಟ್ಟುಕೊಂಡು ಇಂತಹ ಜಾತ್ರಾ ಮಹೋತ್ಸವಗಳನ್ನು ಸರ್ವ ಜನಾಂಗದವರು ಸೇರಿ ಪರಂಪರಾಗತವಾಗಿ ಆಚರಿಸುತ್ತಾ ಬರುತ್ತಿರುವುದು ಹರ್ಷ ತಂದಿದೆ ಎಂದು ಹೇಳಿದರು.

ಈಶ್ವರ ದೇವರ ದೇವಾಸ್ಥಾನದ ಜೀರ್ಣೋದ್ಧಾರ ಟ್ರಸ್ಟ್ ಸಮಿತಿ ಅಧ್ಯಕ್ಷ, ಕಾಡಾ ಅಧ್ಯಕ್ಷ ಸೋಮಣ್ಣ ಬೇವಿನಮರದ, ಉಪಾಧ್ಯಕ್ಷ ಅಶೋಕ ಖರ್ಷಾಪುರ, ತಾಲ್ಲೂಕು ಕಸಾಪ ಅಧ್ಯಕ್ಷ ಶಂಕರಗೌಡ್ರ ಪಾಟೀಲ, ಸಿ.ಎನ್.ಮತ್ತಿಗಟ್ಟಿ, ತಾ.ಪಂ.ಸದಸ್ಯೆ ಉಷಾ ಬಿಳಿಕುದರಿ, ಶಿವಾನಂದ ಬಿಳಿಕುದರಿ, ಪುರಸಭೆ ಸದಸ್ಯ ಶ್ರೀಕಾಂತ ಬುಳ್ಳಕ್ಕನವರ ಮೊದಲಾದವರು ಭಾಗವಹಿಸಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT