ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಂಡೆ ಕೊಬ್ಬರಿ ಖರೀದಿಗೆ ಒತ್ತಾಯ

Last Updated 5 ಡಿಸೆಂಬರ್ 2012, 19:39 IST
ಅಕ್ಷರ ಗಾತ್ರ

ಬೆಂಗಳೂರು: ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ಬೆಲೆ ಸ್ಥಿರೀಕರಣ ಕುರಿತ ಸಚಿವ ಸಂಪುಟದ ಉಪ ಸಮಿತಿ ಜತೆ ಚರ್ಚಿಸಿದ ಬಳಿಕ ಕೊಬ್ಬರಿಗೆ ಬೆಂಬಲ ಬೆಲೆ ಮುಂದುವರಿಸುವ ಕುರಿತು ನಿರ್ಧರಿಸಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಎಸ್.ಕೆ.ಬೆಳ್ಳುಬ್ಬಿ ವಿಧಾನಸಭೆಗೆ ತಿಳಿಸಿದರು.

ಜೆಡಿಎಸ್‌ನ ಎಂ.ಟಿ.ಕೃಷ್ಣಪ್ಪ ಅವರ ಪರವಾಗಿ ಕೆ.ಎಂ.ಶಿವಲಿಂಗೇಗೌಡ ಅವರು ಸರ್ಕಾರದ ಗಮನ ಸೆಳೆದು, ಕೊಬ್ಬರಿಗೆ ನೀಡುತ್ತಿರುವ ಬೆಂಬಲ ಬೆಲೆಯನ್ನು ಮುಂದುವರಿಸಬೇಕು ಎಂದು ಆಗ್ರಹಪಡಿಸಿದರು.

ಡಿ.ವಿ.ಸದಾನಂದ ಗೌಡ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಪ್ರತಿ ಕ್ವಿಂಟಾಲ್ ಕೊಬ್ಬರಿಗೆ ರೂ 700 ಬೆಂಬಲ ಬೆಲೆ ಘೋಷಣೆ ಮಾಡಿದ್ದರು. ಈಗ ಅದನ್ನು ಸ್ಥಗಿತಗೊಳಿಸಲಾಗಿದೆ ಎಂದು ಅವರು ಸರ್ಕಾರದ ಗಮನ ಸೆಳೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT