ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉ.ಕ ಭಾಗ್ಯದ ಬಾಗಿಲು ತೆರೆಯಿತು

Last Updated 11 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಬೆಳಗಾವಿ: `ಸುವರ್ಣ ವಿಧಾನಸೌಧ ಉದ್ಘಾಟನೆಯಿಂದ ಉತ್ತರ ಕರ್ನಾಟಕದ ಭಾಗ್ಯದ ಬಾಗಿಲು ತೆರೆದಂತಾಗಿದೆ. ಉತ್ತರ ಕರ್ನಾಟಕದ ಜನರ ಆಶೋತ್ತರಗಳಿಗೆ ಇದೊಂದು ವೇದಿಕೆಯಾಗಿ ಸ್ಪಂದಿಸಲಿದೆ~ ಎಂದು ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದರು.

ಗುರುವಾರ ನಡೆದ ಸುವರ್ಣ ವಿಧಾನಸೌಧ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, `ಸುವರ್ಣ ವಿಧಾನ ಸೌಧದಲ್ಲಿ ಪ್ರತಿ ವರ್ಷ ಚಳಿಗಾಲದ ಅಧಿವೇಶನ ನಡೆಸುವ ಮೂಲಕ ಉತ್ತರ ಕರ್ನಾಟಕದ ಪ್ರಗತಿಯ ಜೊತೆಗೆ ನಾಡಿನ ಸಮಗ್ರ ಅಭಿವೃದ್ಧಿಗೆ ನಾಂದಿ ಹಾಡಲಾಗುವುದು.

ಸುವರ್ಣ ವಿಧಾನಸೌಧವು ಈ ಭಾಗದ ಏಕತೆಗೆ ಸಹಕಾರಿಯಾಗಲಿದೆ. ಇಲ್ಲಿ ಸಚಿವ ಸಂಪುಟ ಸಭೆ, ರಾಜ್ಯ- ರಾಷ್ಟ್ರ ಮಟ್ಟದ ವಿಚಾರ ಸಂಕಿರಣಗಳು ಕಾಲ ಕಾಲಕ್ಕೆ ನಡೆಯಲಿವೆ~ ಎಂದು ತಿಳಿಸಿದರು.

`ಜೆಡಿಎಸ್ ಹಾಗೂ ಬಿಜೆಪಿ ಸಮ್ಮಿಶ್ರ ಸರ್ಕಾರದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬೆಳಗಾವಿಯಲ್ಲಿ ನಡೆಸಿದ ಅಧಿವೇಶನದಲ್ಲಿ ಸುವರ್ಣ ಸೌಧ ನಿರ್ಮಿಸುವ ಘೋಷಣೆ ಮಾಡಿದರು. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇದಕ್ಕೆ ಭೂಮಿ ಪೂಜೆ ಮಾಡಿ ನಿರ್ಮಿಸಿದರು.

ಉತ್ತರ ಕರ್ನಾಟಕದವನಾದ ನಾನು ಮುಖ್ಯಮಂತ್ರಿಯಾಗಿರುವಾಗ ಈ ಭವ್ಯ ಕಟ್ಟಡ ಉದ್ಘಾಟನೆಯಾಗುತ್ತಿರುವುದು ನನ್ನ ಸುದೈವ. ಕುಮಾರಸ್ವಾಮಿ ಹಾಗೂ ಯಡಿಯೂರಪ್ಪ ಇಬ್ಬರೂ ಅಭಿನಂದನಾರ್ಹ~ ಎಂದು ಶೆಟ್ಟರ್ ಮುಕ್ತ ಕಂಠದಿಂದ ಶ್ಲಾಘಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT