ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

`ಉ.ಕರ್ನಾಟಕದಲ್ಲಿ ಫಾರ್ಮಸಿ ಕಾಲೇಜು'

Last Updated 1 ಜೂನ್ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು: `ಉತ್ತರ ಕರ್ನಾಟಕ ಭಾಗದಲ್ಲಿಯೂ ಹೆಚ್ಚಿನ ಸಂಖ್ಯೆಯಲ್ಲಿ ಸರ್ಕಾರಿ ಔಷಧ ವಿಜ್ಞಾನ ಕಾಲೇಜುಗಳನ್ನು ಸ್ಥಾಪನೆ ಮಾಡುವ ಅಗತ್ಯವಿದ್ದು, ಈ ನಿಟ್ಟಿನಲ್ಲಿ ಸರ್ಕಾರ ಚಿಂತನೆ ನಡೆಸಲಿದೆ' ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ತಿಳಿಸಿದರು.
ಸರ್ಕಾರಿ ಔಷಧ ವಿಜ್ಞಾನ ಕಾಲೇಜು ನಗರದ ನಿಮ್ಹಾನ್ಸ್ ಸಮ್ಮೇಳನ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಸುವರ್ಣ ಸಂಭ್ರಮ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

`ಔಷಧ ವಿಜ್ಞಾನವೂ ಆಸ್ಪತ್ರೆಗಳ ಕಾರ್ಯನಿರ್ವಹಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಹಾಗಾಗಿ ರಾಜ್ಯದ ವಿವಿಧ ಭಾಗಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಔಷಧ ವಿಜ್ಞಾನಕ್ಕೆ ಸಂಬಂಧಪಟ್ಟ ಕಾಲೇಜುಗಳ ಸ್ಥಾಪನೆ ಮಾಡುವ ಅಗತ್ಯವಿದೆ' ಎಂದು ಹೇಳಿದರು.

ಆರೋಗ್ಯ  ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ಯು.ಟಿ.ಖಾದರ್, `ಔಷಧ ವಿಜ್ಞಾನ ಕ್ಷೇತ್ರದಲ್ಲಿನ ಬೆಳವಣಿಗೆಯೂ ಆರೋಗ್ಯ ಇಲಾಖೆಯ ಅಭಿವೃದ್ಧಿಗೆ ಪೂರಕವಾಗಿರುತ್ತದೆ. ಹಾಗಾಗಿ ಔಷಧ ವಿಜ್ಞಾನದ ಕೋರ್ಸ್‌ಗಳಿಗೆ ಪ್ರತಿಭಾವಂತ ವಿದ್ಯಾರ್ಥಿಗಳು ಸೇರ್ಪಡೆಗೊಳ್ಳಬೇಕು' ಎಂದು ತಿಳಿಸಿದರು.

ಇಲಾಖೆ ಪ್ರಧಾನ ಕಾರ್ಯದರ್ಶಿ ಎಂ.ಮದನ್ ಗೋಪಾಲ್ ಅವರು ಮಾತನಾಡಿ, `ಹಲವು ಸವಾಲುಗಳ ನಡುವೆಯೂ ಒಂದು ಸರ್ಕಾರಿ ಶಿಕ್ಷಣ ಸಂಸ್ಥೆಯು ಐವತ್ತು ವರ್ಷಗಳ ಕಾಲ ಶಿಕ್ಷಣವನ್ನು ಯಶಸ್ವಿಯಾಗಿ ಪೂರೈಸುತ್ತಿರುವುದು ಸಂತೋಷದ ವಿಚಾರ' ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT