ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಗ್ರರ ಕೈವಾಡ ಅಲ್ಲಗಳೆಯುವಂತಿಲ್ಲ

Last Updated 18 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ಆಗ್ರಾ, (ಪಿಟಿಐ/ಐಎಎನ್‌ಎಸ್): ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ಸಂಜೆ ಸಂಭವಿಸಿದ ಸ್ಫೋಟದ ಹಿಂದೆ ಉಗ್ರರ ಕೈವಾಡದ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ ಎಂದು ಉತ್ತರ ಪ್ರದೇಶದ ಉನ್ನತ ಪೊಲೀಸ್ ಮೂಲಗಳು ತಿಳಿಸಿವೆ.

`ಆಸ್ಪತ್ರೆಯ ಸ್ವಾಗತ ಕೋಣೆಯ ಪ್ರದೇಶದಲ್ಲಿ ನಡೆದ ಸ್ಫೋಟವನ್ನು ತನಿಖಾ ಸಂಸ್ಥೆಗಳು ಎಲ್ಲ ಕೋನಗಳಿಂದ ಪರಿಶೀಲಿಸುತ್ತಿವೆ~ ಎಂದು ಉತ್ತರ ಪ್ರದೇಶದ ವಿಶೇಷ ಪೊಲೀಸ್ ಮಹಾ ನಿರ್ದೇಶಕ ಬ್ರಿಜ್ ಲಾಲ್ ಅವರು ಹೇಳಿದ್ದಾರೆ.

ಕಡಿಮೆ ತೀವ್ರತೆಯ ಐಇಡಿ ಬಳಕೆ: ಸ್ಫೋಟಕ್ಕೆ ಕಡಿಮೆ ತೀವ್ರತೆಯ ಸುಧಾರಿತ ಸ್ಫೋಟಕ ಸಾಧನ (ಐಇಡಿ)~ವನ್ನು ಬಳಸಲಾಗಿತ್ತು ಎಂದು ಪೊಲೀಸರು ಭಾನುವಾರ ಹೇಳಿದ್ದಾರೆ. ದಾಳಿಯಲ್ಲಿ 4 ಜನರು ಗಾಯಗೊಂಡಿದ್ದರು. `ಪ್ರಾಥಮಿಕ ತನಿಖೆಗಳ ಪ್ರಕಾರ ಸ್ಫೋಟಕದಲ್ಲಿ ಕಡಿಮೆ ತೀವ್ರತೆಯ ಸುಧಾರಿತ ಸ್ಫೋಟಕ ಸಾಧನದ ಪಟ್ಟಿಯೊಂದಿಗೆ ಉಕ್ಕನ್ನು ಬಳಸಲಾಗಿತ್ತು~ ಎಂದು ಸುದ್ದಿಗಾರರಿಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT