ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಚಿತ ಸೈಕಲ್ ಬದಲಿಗೆ ನಗದು

Last Updated 4 ಜನವರಿ 2011, 6:55 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಪ್ರೌಢಶಾಲೆಗಳಲ್ಲಿ 2010-11ನೇ ವರ್ಷ   ದಲ್ಲಿ ಎಂಟನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ 5.92 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ಬದಲಿಗೆ ತಲಾ 2,250 ರೂಪಾಯಿ ನಗದು ವಿತರಿಸಲು ಸರ್ಕಾರ ನಿರ್ಧರಿಸಿದೆ.

ವಿದ್ಯಾರ್ಥಿಗಳಿಗೆ ವಿತರಿಸಲು ಸೈಕಲ್ ಖರೀದಿ ಪ್ರಕ್ರಿಯೆ ಈವರೆಗೂ ಆರಂಭವಾಗಿಲ್ಲ. ಈ ಹಿನ್ನೆಲೆಯಲ್ಲಿ ಈ ಬಾರಿ ಸೈಕಲ್ ಬದಲಿಗೆ ವಿದ್ಯಾರ್ಥಿಗಳಿಗೆ ನೇರವಾಗಿ ನಗದು ವಿತರಿಸಲು ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಹಿಂದಿನ ವರ್ಷ ತಲಾ ರೂ. 2,350  ದರ ನೀಡಿ ಸೈಕಲ್ ಖರೀದಿಸಲಾಗಿತ್ತು. ಆದರೆ ಈ ವರ್ಷ ವಿದ್ಯಾರ್ಥಿಗಳಿಗೆ ರೂ 2,250 ರೂಪಾಯಿ ನೀಡಲು ಸರ್ಕಾರ ತೀರ್ಮಾನಿಸಿದೆ. ಸಂಪುಟ ಸಭೆಯ ಬಳಿಕ ಉನ್ನತ ಶಿಕ್ಷಣ ಸಚಿವ ಡಾ.  ವಿ. ಎಸ್.ಆಚಾರ್ಯ ಈ ವಿವರ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT