ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ: `ಅನ್ನಭಾಗ್ಯ' ಯೋಜನೆಗೆ ಚಾಲನೆ

Last Updated 11 ಜುಲೈ 2013, 11:15 IST
ಅಕ್ಷರ ಗಾತ್ರ

ಕಾಪು (ಪಡುಬಿದ್ರಿ): ರಾಜ್ಯದಲ್ಲಿ ಆರ್ಥಿಕವಾಗಿ ಹಿಂದುಳಿದ ಹಾಗೂ ಎಲ್ಲಾ ಬಡವರನ್ನು ಹಸಿವಿನಿಂದ ಮುಕ್ತವಾಗಿಸ ಬೇಕೆಂಬ ಉದ್ದೇಶದಿಂದ ಅನ್ನಭಾಗ್ಯ ಯೋಜನೆಯನ್ನು ರಾಜ್ಯದಾದ್ಯಂತ ಜಾರಿಗೆ ತರಲಾಗಿದೆ ಎಂದು ಎಂದು ನಗರಾಭಿವೃದ್ಧಿ ಸಚಿವ ವಿನಯಕುಮಾರ್ ಸೊರಕೆ ಹೇಳಿದರು.

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾ ಯಿತಿ, ಆಹಾರ- ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾ ಖೆಯ ಸಂಯುಕ್ತ ಆಶ್ರಯದಲ್ಲಿ ಬಿಪಿಎಲ್ ಪಡಿತರ ಚೀಟಿದಾರರಿಗೆ ಕೆ.ಜಿಗೆ ಒಂದು ರೂಪಾಯಿ ದರದಲ್ಲಿ ಅಕ್ಕಿ ವಿತರಿಸುವ `ಅನ್ನಭಾಗ್ಯ ಯೋಜನೆ ಯನ್ನು ಕಾಪುವಿನ ವೀರಭದ್ರ ಸಭಾ ಭವನದಲ್ಲಿ ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು.

ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಯಲ್ಲಿ ಘೋಷಣೆ ಮಾಡಿದಂತೆ ಈ ಮಹತ್ವಾಕಾಂಕ್ಷೆಯ ಯೋಜನೆಯ ಮೂಲಕ ರಾಜ್ಯದಲ್ಲಿ ದೊಡ್ಡಮಟ್ಟದ ಬದಲಾವಣೆಗೆ ಚಾಲನೆ ನೀಡಲಾಗಿದೆ. ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿ ಸಿರುವ ಆಹಾರ ಭದ್ರತೆ ಯೋಜನೆ ಯಿಂದ ರಾಜ್ಯ ಸರ್ಕಾರದ ಅನ್ನ ಭಾಗ್ಯ ಯೋಜನೆಗೆ  ಸರ್ಕಾರಕ್ಕೆ ಆಗುವ ವಾರ್ಷಿಕ 7 ಸಾವಿರ ಕೋಟಿ ರೂಪಾಯಿ ಹೊರೆಯು 3 ಸಾವಿರ ಕೋಟಿ ರೂಪಾ ಯಿಗೆ ಇಳಿಯುವ ನಿರೀಕ್ಷೆ ಇದೆ ಎಂದರು.

ಬಿಪಿಎಲ್ ಪಡಿತರ ಚೀಟಿ ಸಮಸ್ಯೆ ಗಳಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಕರೆದು ತೆಗೆದುಕೊಂಡ ತೀರ್ಮಾನದಂತೆ ಅತಿ ಶೀಘ್ರದಲ್ಲಿ ನಿಯೋಗವೊಂದು ಆಹಾರ ಸಚಿವರನ್ನು  ಭೇಟಿ ಮಾಡಲಿದೆ.

ಎಪಿಎಲ್‌ನಲ್ಲಿರುವ ಅರ್ಹ ಫಲಾನುಭ ವಿಗಳನ್ನು ಬಿಪಿಎಲ್ ಪಟ್ಟಿಗೆ ಸೇರಿಸಲು ಅವಕಾಶ ಕಲ್ಪಿಸಿಕೊಡಲಾಗುವುದು. ಅದೇ ರೀತಿ ಎಪಿಎಲ್ ಪಡಿತರ ಚೀಟಿದಾ ರರಿಗೂ ಈ ಹಿಂದಿನ ಎಲ್ಲ ಸೌಲಭ್ಯ ಗಳನ್ನು ಜೋಡಣೆ ಮಾಡುವ ಯೋಜನೆ ಸರ್ಕಾರದ ಮುಂದೆ ಇದೆ ಎಂದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಉಪೇಂದ್ರ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ಬಿಪಿಎಲ್ ಕುಟುಂಬಗಳಿಗೆ ಸಾಂಕೇತಿ ಕವಾಗಿ ಯೋಜನೆಯ ಅಕ್ಕಿ ಹಾಗೂ ನೂತನ ಬಿಪಿಎಲ್ ಪಡಿತರ ಚೀಟಿಯನ್ನು ವಿತರಿಸಲಾಯಿತು. ಜಿಲ್ಲಾಧಿಕಾರಿ ಡಾ.ಎಂ.ಟಿ.ರೇಜು ಯೋಜನೆ ಬಗ್ಗೆ ಮಾಹಿತಿ ನೀಡಿದರು.

ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಗೌರಿ ಪೂಜಾ‌ರ್ತಿ, ಕಾಪು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಷಾ ಶೆಣೈ, ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಅರುಣ್ ಕುಮಾರ್ ಪಾದೂರು, ಸದಸ್ಯರಾದ ಕಟಪಾಡಿ ಶಂಕರ ಪೂಜಾರಿ, ಐಡಾ ಗಿಬ್ಬಾ ಡಿಸೋಜ, ಗೀತಾಂಜಲಿ ಸುವರ್ಣ, ಕಾಪು ದಿವಾಕರ ಹೆಗ್ಡೆ, ನವೀನ್ ಚಂದ್ರ ಶೆಟ್ಟಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಭಾಕರ ಶರ್ಮ, ಉಡುಪಿ ತಹಶೀಲ್ದಾರ್ ಅಭಿಜಿನ್, ಇಲಾಖೆಯ ಉಪನಿರ್ದೇಶಕ ಅರುಣ್ ಕುಮಾರ್ ಸಂಗಾವಿ, ಸುಂದರ್ ಪ್ರಭು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT