ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತಮ ಮೊತ್ತದತ್ತ ಇಂಗ್ಲೆಂಡ್

Last Updated 19 ಜುಲೈ 2012, 19:30 IST
ಅಕ್ಷರ ಗಾತ್ರ

ಲಂಡನ್ (ಎಎಫ್‌ಪಿ): ಅಲಸ್ಟರ್ ಕುಕ್ (106, 238ಎಸೆತ, 11ಬೌಂಡರಿ, 1 ಸಿಕ್ಸರ್) ಅವರ ಬ್ಯಾಟಿಂಗ್ ನೆರವಿನಿಂದ ಇಂಗ್ಲೆಂಡ್ ತಂಡ ಇಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಕ್ರಿಕೆಟ್ ಪಂದ್ಯದಲ್ಲಿ ಉತ್ತಮ ಮೊತ್ತದತ್ತ ಹೆಜ್ಜೆ ಹಾಕಿದೆ.

ಕೆನಿಂಗ್ಟನ್ ಓವಲ್‌ನಲ್ಲಿ ಗುರುವಾರ ಆರಂಭವಾದ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಬ್ಯಾಟಿಂಗ್ ಆರಿಸಿಕೊಂಡಿತು. ಮೊದಲ ಓವರ್‌ನಲ್ಲಿಯೇ ಆ್ಯಂಡ್ರ್ಯೂ ಸ್ಟ್ರಾಸ್ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಈ ವೇಳೆ ಕುಕ್ ಹಾಗೂ ಟ್ರಾಟ್ ಎರಡನೆ ವಿಕೆಟ್‌ಗೆ 170 ರನ್‌ಗಳ ಜೊತೆಯಾಟವಾಡಿ ಆರಂಭಿಕ ಸಂಕಷ್ಟದಿಂದ ತಂಡವನ್ನು ಪಾರು ಮಾಡಿದರು. ಪತ್ರಿಕೆ ಮುದ್ರಣಕ್ಕೆ ಹೋಗುವ ವೇಳೆಗೆ 15 ಓವರ್‌ಗಳ ಆಟ ಬಾಕಿ ಇತ್ತು.

ಸಂಕ್ಷಿಪ್ತ ಸ್ಕೋರು: ಇಂಗ್ಲೆಂಡ್ 75 ಓವರ್‌ಗಳಲ್ಲಿ 2 ವಿಕೆಟ್‌ಗೆ 239. (ಅಲಸ್ಟರ್ ಕುಕ್ ಬ್ಯಾಟಿಂಗ್ 106, ಜೊನಾಥನ್ ಟ್ರಾಟ್ 71, ಕೆವಿನ್ ಪೀಟರ್ಸನ್ ಬ್ಯಾಟಿಂಗ್ 39; ಮಾರ್ನ್ ಮಾರ್ಕೆಲ್ 40ಕ್ಕೆ2).

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT