ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

`ಉತ್ತಮ ಸಮಾಜಕ್ಕೆ ಶಿಕ್ಷಕರ ಪಾತ್ರ ಅಪಾರ'

Last Updated 6 ಸೆಪ್ಟೆಂಬರ್ 2013, 5:50 IST
ಅಕ್ಷರ ಗಾತ್ರ

ಶಿಕಾರಿಪುರ: ಉತ್ತಮ ವ್ಯಕ್ತಿತ್ವ ನಿರ್ಮಾಣ ಮಾಡುವ ಕಾರ್ಯ ಶಿಕ್ಷಕರಿಂದ ಮಾತ್ರ ಸಾಧ್ಯ ಎಂದು ಸಂಸತ್ ಸದಸ್ಯ ಬಿ.ವೈ.ರಾಘವೇಂದ್ರ ಅಭಿಪ್ರಾಯಪಟ್ಟರು.

ಪಟ್ಟಣದ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಕುಮದ್ವತಿ ವಸತಿಯುತ ಕೇಂದ್ರೀಯ ಶಾಲೆ ಸಭಾಂಗಣದಲ್ಲಿ ಗುರುವಾರ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಉತ್ತಮ ಸಮಾಜ ನಿರ್ಮಾಣ ಹಾಗೂ ಬೆಳವಣಿಗೆಯಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾಗಿದೆ. ಸಮಾಜದಲ್ಲಿರುವ ಪ್ರತಿ ವ್ಯಕ್ತಿಯಲ್ಲಿ ಸಂಸ್ಕೃತಿ ಹಾಗೂ ಮಾನವೀಯ ಮೌಲ್ಯಗಳನ್ನು ತುಂಬುವ ಮೂಲಕ ವ್ಯಕ್ತಿಯ ವ್ಯಕ್ತಿತ್ವ ವಿಕಸನಕ್ಕೆ ಶಿಕ್ಷಕರ ಸಹಕಾರ ಅಗತ್ಯವಾಗಿದೆ.
ಪ್ರತಿಯೊಬ್ಬ ವ್ಯಕ್ತಿಯನ್ನು ಶಿಲ್ಪಿಯನ್ನಾಗಿಸುವ ಶಕ್ತಿ ಶಿಕ್ಷಕರಲ್ಲಿದೆ ಎಂದರು.

ಉತ್ತಮ ಗುಣ ಹಾಗೂ ವಿದ್ಯೆ ಹೊಂದಿದ ವ್ಯಕ್ತಿಯಿಂದ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದ ಅವರು,ಜಾತಿ, ಹಣ ಹಾಗೂ ರಾಜಕಾರಣದಿಂದ ದೂರ ಉಳಿದು ಉತ್ತಮ ವಿದ್ಯಾದಾನ ಮಾಡುವ ಮೂಲಕ ದೇಶವನ್ನು ಕಟ್ಟುವ ಕಾರ್ಯದಲ್ಲಿ ಶಿಕ್ಷಕರು ನಿರತರಾಗಬೇಕು ಎಂದರು.

ಶೇ 100 ಫಲಿತಾಂಶ ನೀಡಿದ ಶಿಕ್ಷಕರಿಗೆ ನೆನಪಿನ ಕಾಣಿಕೆ ನೀಡಲಾಯಿತು. ಸ್ವಾಮಿ ವಿವೇಕಾನಂದ ಸಂಸ್ಥೆಯ ಅಧ್ಯಕ್ಷ ಎಂ.ಬಿ.ಶಿವಕುಮಾರ್, ನಿರ್ದೇಶಕರಾದ ತೇಜಸ್ವಿನಿ ರಾಘವೇಂದ್ರ, ಡೀನ್ ಕೆ.ಎಸ್.ಎನ್.ಭಟ್, ಪ್ರಾಂಶುಪಾಲ ರಾದ ಡಾ.ಕೆ.ಆರ್.ದಯಾನಂದ್, ಡಾ.ವೀರೇಂದ್ರಗೌಡ, ಡಾ.ಜಯಶ್ರೀ, ಕುಬೇರಪ್ಪ, ವಿದ್ಯಾಶಂಕರ್, ಡಾ.ವಿನಾಯಕ್, ಮುಖ್ಯೋಪಾಧ್ಯಯ ಪರಮೇಶ್ವರಪ್ಪ, ವಿಶ್ವನಾಥ್ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT