ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಒಳನಾಡಿನಲ್ಲಿ ಮುಂಗಾರು ಚುರುಕು

Last Updated 7 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಭಾನುವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದ ಉತ್ತರ ಒಳನಾಡಿನಲ್ಲಿ ಚುರುಕಾಗಿರುವ ಮುಂಗಾರು, ಕರಾವಳಿಯಲ್ಲಿ ದುರ್ಬಲವಾಗಿದೆ. ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆಯಾಗಿದ್ದು, ಕರಾವಳಿಯಲ್ಲಿ ಒಣಹವೆ ಮುಂದುವರೆದಿದೆ.

ವಿಜಾಪುರ ಜಿಲ್ಲೆಯ ದೇವರಹಿಪ್ಪರಗಿಯಲ್ಲಿ ಅತಿ ಹೆಚ್ಚು 9 ಸೆಂ.ಮೀ ಮಳೆಯಾಗಿದೆ. ಅಥಣಿ 7, ಪಾವಗಡ, ವೈ.ಎನ್.ಹೊಸಕೋಟೆ 6, ಬೀಳಗಿ, ವಿಜಾಪುರ, ಜೇವರ್ಗಿ, ಕವಿತಾಳ 5, ಗಂಗಾವತಿ, ಕಾರಟಗಿ, ನೆಲೋಗಿ, ಕಂಪ್ಲಿ, ಮಧುಗಿರಿ 4, ಕುಡುಚಿ, ಬಬಲೇಶ್ವರ, ತಾಳಿಕೋಟೆ, ಇಂಡಿ, ಶಹಾಪುರ, ಬೆಂಗಳೂರು ನಗರ, ಬರಗೂರು, ಚಿಂತಾಮಣಿ 3, ಹುನಗುಂದ, ಇಳಕಲ್, ಮುದ್ದೇಬಿಹಾಳ, ಔರಾದ, ಅಫ್ಜಲ್‌ಪುರ, ಕೆಂಭಾವಿ, ಸೈದಾಪುರ, ಮಸ್ಕಿ, ಶ್ರೀನಿವಾಸಪುರ, ಚಿಕ್ಕಬಳ್ಳಾಪುರ 2, ಹುಕ್ಕೇರಿ, ಲೋಕಾಪುರ, ಜಮಖಂಡಿ, ಆಲಮಟ್ಟಿ, ನಾರಾಯಣಪುರ, ಲಿಂಗಸಗೂರು, ಸಿಂಧನೂರು, ರಾಯಚೂರು, ಮೊಳಕಾಲ್ಮೂರು, ರಾಮಪುರದಲ್ಲಿ 1 ಸೆಂ.ಮೀ ಮಳೆಯಾಗಿದೆ. ಚಾಮರಾಜನಗರದಲ್ಲಿ ಗರಿಷ್ಠ ಉಷ್ಣಾಂಶ 32.9 ಡಿಗ್ರಿ ಸೆಲ್ಸಿಯಸ್ ಮತ್ತು ದಾವಣಗೆರೆಯಲ್ಲಿ ಕನಿಷ್ಠ ಉಷ್ಣಾಂಶ 18.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಮುನ್ಸೂಚನೆ: ಮುಂದಿನ 48 ಗಂಟೆಗಳ ಕಾಲ ಒಳನಾಡಿನ ಹಲವೆಡೆ ಮತ್ತು ಕರಾವಳಿಯ ಕೆಲವು ಪ್ರದೇಶಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT