ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರಪ್ರದೇಶದ ನದಿಗಳಲ್ಲಿ ಶವಗಳ ಪತ್ತೆ

ಉತ್ತರಾಖಂಡ ಪ್ರಕೃತಿ ವಿಕೋಪ
Last Updated 8 ಜುಲೈ 2013, 11:25 IST
ಅಕ್ಷರ ಗಾತ್ರ

ಲಖನೌ (ಐಎಎನ್‌ಎಸ್) : ಮೂರು ವಾರಗಳ ಹಿಂದೆ ಉತ್ತರಾಖಂಡದಲ್ಲಿ ಸುರಿದ ಭಾರೀ ಮಳೆಯಿಂದ ಉಂಟಾದ ಪ್ರವಾಹದಲ್ಲಿ ಕೊಚ್ಚಿಹೋಗಿದ್ದ ಸಾವಿರಾರು ಜನರ ಮೃತದೇಹಗಳು ಇದೀಗ ಪಕ್ಕದ ಉತ್ತರ ಪ್ರದೇಶದ ನದಿಗಳಲ್ಲಿ ಕಾಣಿಸಿಕೊಳ್ಳುತ್ತಿವೆ.

ಉತ್ತರಾಖಂಡದಲ್ಲಿ ಜೂನ್ 15 ರಿಂದ 17ರ ವರೆಗೆ ಎಡೆಬಿಡದೆ ಸುರಿದ ಭಾರೀ ಮಳೆಯಿಂದಾಗಿ ಪ್ರವಾಹ ಸಂಭವಿಸಿ ಭೂಕುಸಿತವಾಗಿತ್ತು. ಇದರಲ್ಲಿ ಕೊಚ್ಚಿಹೋದ ಯಾತ್ರಿಗಳು, ಜಾನುವಾರುಗಳ ಬಗ್ಗೆ ಇದುವರೆಗೂ ಸ್ಪಷ್ಟ ಅಂಕಿ ಅಂಶ ದೊರೆತಿಲ್ಲ. ಕಳೆದ 15 ದಿನಗಳಲ್ಲಿ ಉತ್ತರ ಪ್ರದೇಶದ ವಿವಿಧ ಜಿಲ್ಲೆಗಳಲ್ಲಿ 80ಕ್ಕೂ ಅಧಿಕ ಮೃತದೇಹಗಳು ಪತ್ತೆಯಾಗಿವೆ ಎಂದು ಪೊಲೀಸರು ಹೇಳಿದರು.

ಎಲ್ಲಾ ಮೃತದೇಹಗಳೂ ಜಲವಾಸಿ ಪ್ರಾಣಿಗಳಿಂದ ತಿನ್ನಲ್ಪಟ್ಟಿದ್ದು ಗುರುತು ಪತ್ತೆಯಾಗದಂತಾಗಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.

ವಿಪತ್ತು ನಿರ್ವಹಣೆಗೆ ನಿಯೋಜಿಸಲ್ಪಟ್ಟಿರುವ ಉತ್ತರ ಪ್ರದೇಶದ ವಿಶೇಷ ಪೊಲೀಸ್ ತಂಡವು ಹರಿದ್ವಾರದಲ್ಲಿ 30 ಮೃತದೇಹಗಳನ್ನು ಪತ್ತೆಹಚ್ಚಿದ್ದು,  ಡಿಎನ್‌ಎ ಮಾದರಿಗಳನ್ನು ಸಂಗ್ರಹಿಸಿದ ನಂತರ 29 ಮೃತದೇಹಗಳ ಅಂತ್ಯಸಂಸ್ಕಾರ ನಡೆಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT