ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ಸವಗಳ ಲಾಂಛನ ಬಿಡುಗಡೆ

ಚಾಲುಕ್ಯ ಉತ್ಸವ, ರನ್ನ ವೈಭವ ಅರ್ಥಪೂರ್ಣ ಆಚರಣೆಗೆ ತೀರ್ಮಾನ
Last Updated 19 ಡಿಸೆಂಬರ್ 2013, 8:31 IST
ಅಕ್ಷರ ಗಾತ್ರ

ಬಾಗಲಕೋಟೆ: ಜನವರಿ 4 ಮತ್ತು 5ರಂದು ಮುಧೋಳದಲ್ಲಿ ‘ರನ್ನ ವೈಭವ’ ಹಾಗೂ ಫೆಬ್ರವರಿ 7 ಮತ್ತು 8ರಂದು ಬಾದಾಮಿ ಮತ್ತು 9ರಂದು ಐಹೊಳೆಯಲ್ಲಿ ರಾಷ್ಟ್ರೀಯ ಚಾಲುಕ್ಯ ಉತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಬುಧವಾರ ನವನಗರದ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.

ಚಾಲುಕ್ಯ ಉತ್ಸವ ಮತ್ತು ರನ್ನ ವೈಭವಕ್ಕೆ ಸಂಬಂಧಿಸಿದ ಎರಡು ಪ್ರತ್ಯೇಕ ಲಾಂಛನಗಳನ್ನು ಬಿಡುಗಡೆ­ಗೊಳಿಸಲಾಯಿತು. ಚಾಲುಕ್ಯ ಉತ್ಸವದ ಸಂಪೂರ್ಣ ಮಾಹಿತಿ ಒಳಗೊಂಡ www. chalukyaustava.com ವೆಬ್‌ಸೈಟ್‌ ಹಾಗೂ www. facebook.com/ chalukyaustav.badami ಪೇಸ್‌ಬುಕ್‌ಗೆ ಸಭೆಯಲ್ಲಿ ಚಾಲನೆ ನೀಡಲಾಯಿತು.

ರನ್ನ ವೈಭವ: ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಆರ್‌. ಪಾಟೀಲ, ಮುಧೋಳದಲ್ಲಿ ಎರಡು ದಿನಗಳ ಕಾಲ ನಡೆಯುವ ರನ್ನ ವೈಭವ ಉದ್ಘಾಟನೆಗೆ ಸಚಿವರೂ ಆದ ಚಲನಚಿತ್ರ ನಟ ಅಂಬರೀಷ್‌ ಅವರನ್ನು ಆಹ್ವಾನಿಸಲಾಗುವುದು ಎಂದರು.

ಕವಿಚಕ್ರವರ್ತಿ ರನ್ನನ ಸಾಹಿತ್ಯ ಕುರಿತಂತೆ ವಿಚಾರಗೋಷ್ಠಿ, ಕವಿಗೋಷ್ಠಿ ಹಾಗೂ ರಾಷ್ಟ್ರ ಮತ್ತು ರಾಜ್ಯಮಟ್ಟದ ಶ್ರೇಷ್ಠ ಕಲಾವಿದರಿಂದ ನೃತ್ಯ, ಸಂಗೀತ ಕಾರ್ಯಕ್ರಮ ಏರ್ಪಡಿಸಲಾಗುವುದು ಎಂದು ತಿಳಿಸಿದರು.

ಜಿಲ್ಲೆಯ ಹಾಗೂ ಹೊರ ಜಿಲ್ಲೆಯ 40 ಜಾನಪದ ಕಲಾತಂಡಗಳು ಮೆರವಣಿಗೆ­ಯಲ್ಲಿ ಪಾಲ್ಗೊಳ್ಳಲಿವೆ. ಸ್ಥಳೀಯರಿಗೆ ಹೆಚ್ಚಿನ ಆದ್ಯತೆ ನೀಡಲಾ­ಗುವುದು ಎಂದರು.

ಚಾಲುಕ್ಯ ಉತ್ಸವ: ಚಾಲುಕ್ಯ ಉತ್ಸವವನ್ನು ಬಾದಾಮಿಯಲ್ಲಿ ಎರಡು ದಿನ ಹಾಗೂ ಐಹೊಳೆಯಲ್ಲಿ ಸಮಾ­ರೋಪ ಸಮಾರಂಭ ನಡೆಯ­ಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಉತ್ಸವದ ಉದ್ಘಾಟನೆಗೆ ಆಹ್ವಾನಿಸಲಾಗುವುದು ಎಂದು ಸಚಿವರು ಹೇಳಿದರು.
ಚಾಲುಕ್ಯರ ಐತಿಹಾಸಿಕ ಪರಂಪರೆ, ಕಲೆ, ಸಾಹಿತ್ಯ, ಸಂಸ್ಕೃತಿಯನ್ನು ಮೆಲಕು ಹಾಕುವ ಚಾಲುಕ್ಯ ಉತ್ಸವದಲ್ಲಿ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಖ್ಯಾತಿಯ ಕಲಾವಿದರು, ನೃತ್ಯ ತಂಡಗಳು, ಸಂಗೀತಗಾರರು ಭಾಗವಹಿಸಲಿದ್ದಾರೆ ಎಂದರು.

ಚಾಲುಕ್ಯರ ನಾಡಿನ ಐತಿಹಾಸಿಕ ಪರಂಪರೆ ಕುರಿತಂತೆ ಕವಿ ಕಾವ್ಯ ಕುಂಚ, ವಿಚಾರಗೋಷ್ಠಿ, ಚಿತ್ರಕಲಾ ಶಿಬಿರ, ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ, ಗ್ರಾಮೀಣ ಕ್ರೀಡಾಕೂಟ, ಲೇಜರ್‌ ಶೋ ಏರ್ಪಡಿಸಲಾಗುವುದು ಎಂದು ಹೇಳಿದರು.

ಚಾಲುಕ್ಯರ ನಾಡಿನ ಬಗ್ಗೆ ಸಂಶೋಧನೆ ನಡೆಸಿರುವ ಇತಿಹಾಸ ಸಂಶೋಧಕರನ್ನು ಆಹ್ವಾನಿಸಿ ಗೌರವಿಸಲಾಗುವುದು, ಅಲ್ಲದೇ ಬಾದಾಮಿ ಚಾಲುಕ್ಯರ ಪುನರ್‌ಶೋಧನೆ ಎಂಬ ಪುಸ್ತಕವನ್ನು ಸಹ ಹೊರತರಲಾಗುವುದು ಎಂದರು.

ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಶಾಂತವ್ವ ಭೂಷಣ್ಣನ್ನವರ, ಉಪಾಧ್ಯಕ್ಷ ಕೃಷ್ಣಾ ಓಗೆಣ್ಣನ್ನವರ, ಜಿಲ್ಲಾಧಿಕಾರಿ ಮನೋಜ್‌ ಜೈನ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಯಡಾ ಮಾರ್ಟಿನ್‌ ಮಾರ್ಬನ್ಯಾಂಗ್‌, ಜಿಲ್ಲಾ ಪಂಚಾಯ್ತಿ ಸಿಇಒ ಎಸ್‌.ಜಿ. ಪಾಟೀಲ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಶ್ರೀಶೈಲ ಕರಿಶಂಕರಿ, ಪ್ರವಾಸೋದ್ಯಮ ಇಲಾಖೆ ಪ್ರಭಾರ ಸಹಾಯಕ ನಿರ್ದೇಶಕ ಮಂಜುನಾಥ ಸುಳೊಳ್ಳಿ, ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರಗೌಡ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT