ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉದ್ಯೋಗ ಖಾತರಿ: 12 ಲಕ್ಷ ನಕಲಿ ಕಾರ್ಡ್

Last Updated 15 ಫೆಬ್ರುವರಿ 2011, 19:15 IST
ಅಕ್ಷರ ಗಾತ್ರ

ಬೆಂಗಳೂರು: ‘ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ 12 ಲಕ್ಷ ನಕಲಿ ಉದ್ಯೋಗ ಕಾರ್ಡ್‌ಗಳನ್ನು ಪತ್ತೆ ಹಚ್ಚಿ, ಈ ಅವ್ಯವಹಾರದಲ್ಲಿ ಭಾಗಿಯಾಗಿರುವ 337 ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ’ ಎಂದು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದರು.

ಕ್ಷೇತ್ರ ಪ್ರಚಾರ ನಿರ್ದೇಶನಾಲಯ ನಗರದಲ್ಲಿ ಮಂಗಳವಾರ ಆಯೋಜಿಸಿದ್ದ ಗ್ರಾಮೀಣಾಭಿವೃದ್ಧಿ ಕಾರ್ಯಾಗಾರವನ್ನು ಉದ್ಘಾಟಿಸಿ, ‘ರಾಜ್ಯದಲ್ಲಿ ಯೋಜನೆಯಡಿ 62 ಲಕ್ಷ ಉದ್ಯೋಗ ಕಾರ್ಡ್‌ಗಳನ್ನು ವಿತರಿಸಲಾಗಿತ್ತು. ಇದೀಗ ನಕಲಿ ಉದ್ಯೋಗ ಕಾರ್ಡ್ ಸೃಷ್ಟಿಸಿ ವಂಚಿಸಿದವರ ವಿರುದ್ಧಟ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಜನಪ್ರತಿನಿಧಿಗಳು ಸೇರಿದಂತೆ 102 ಮಂದಿ ವಿರುದ್ಧ  ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸಲಾಗಿದೆ’ ಎಂದರು.

‘ಯೋಜನೆಯನ್ನು ಯಾವ ರೀತಿ ಅನುಷ್ಠಾನ ಮಾಡಲಾಗಿದೆ ಎನ್ನುವ ಬಗ್ಗೆ ನಿಗಾ ವಹಿಸಲು ಪ್ರತಿ ಜಿಲ್ಲೆಗೆ ಒಂಬಡ್ಸ್‌ಮನ್‌ಗಳನ್ನು ನೇಮಿಸಲಾಗಿದೆ. 15 ಜಿಲ್ಲೆಗಳಲ್ಲಿ ಈಗಾಗಲೇ ಒಂಬಡ್ಸ್‌ಮನ್‌ಗಳು ಕಾರ್ಯ ನಿರ್ವಹಿಸುತ್ತಿದ್ದಾರೆ. ಯೋಜನೆಯಡಿ ಮನ್ಗಂದಂತೆ ಕಾಮಗಾರಿಗಳಿಗೆ ಅನುದಾನ ಪಡೆಯುವುದಕ್ಕೆ ಇದೀಗ ರ್ನ್ಗಿಂಧ ಹೇರಲಾಗಿದೆ. ಒಂದು ಗ್ರಾಮ ಪಂಚಾಯ್ತಿಯು 5ರಿಂದ 6 ಕಾಮಗಾರಿಗಳನ್ನು ಮಾತ್ರ ನಿರ್ವಹಿಸುವಂತೆ ಸೂಚಿಸಲಾಗಿದೆ. ಇದರಿಂದ ಕಾಮಗಾರಿಗಳು ವಿಳಂಬವಾಗುವುದೂ ಸಹ ತಪ್ಪುತ್ತದೆ’ ಎಂದು ಹೇಳಿದರು.

‘ಈಗ ಗ್ರಾಮ ಪಂಚಾಯ್ತಿಗಳಿಗೆ ನೀಡಲಾಗುತ್ತಿರುವ 6 ಲಕ್ಷ ರೂಪಾಯಿ ಅನುದಾನದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವುದು ಸಾಧ್ಯವಾಗುತ್ತಿಲ್ಲ, ಜನಸಂಖ್ಯೆಗೆ ಅನುಗುಣವಾಗಿ 9, 12, 15 ಹಾಗೂ 20 ಲಕ್ಷ ರೂಪಾಯಿಗಳ ಅನುದಾನ ಬಿಡುಗಡೆಗೆ ತೀರ್ಮಾನಿಸಲಾಗಿದೆ. ಮುಖ್ಯಮಂತ್ರಿಗಳು ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು ಪ್ರಸ್ತುತ ಬಜೆಟ್‌ನಲ್ಲಿ ಹೆಚ್ಚಿನ ಅನುದಾನ ಬಿಡುಗಡೆಯಾಗುವ ನಿರೀಕ್ಷೆ ಇದೆ’ ಎಂದರು.

ಪಿಡಿಒ ನೇಮಕ: ‘ರಾಜ್ಯದಲ್ಲಿ ಒಟ್ಟು 5,628 ಗ್ರಾಮ ಪಂಚಾಯ್ತಿಗಳಿದ್ದು, ಪ್ರತಿ ಗ್ರಾಮ ಪಂಚಾಯ್ತಿಗೆ ಒಬ್ಬರಂತೆ ಪಿಡಿಒ (ಪಂಚಾಯತ್ ಅಭಿವೃದ್ಧಿ ಅಧಿಕಾರಿ) ನೇಮಿಸಲು ಸರ್ಕಾರ ಉದ್ದೇಶಿಸಿದ್ದು ಶೀಘ್ರವೇ 1,400 ಪಿಡಿಒ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಈಗಾಗಲೇ 2,500 ಪಿಡಿಒಗಳನ್ನು ನೇಮಕ ಮಾಡಿಕೊಳ್ಳಲಾಗಿದೆ. ಉಳಿದ ಹುದ್ದೆಗಳನ್ನು ಬಡ್ತಿ ಆಧಾರದಲ್ಲಿ ತುಂಬತ್ತೇವೆ’ ಎಂದು ಹೇಳಿದರು.

‘ಈ ಮೊದಲು ಇಲಾಖೆಗೆ ಎರವಲು ಸೇವೆಯ ಮೇಲೆ ಅಧಿಕಾರಿಗಳನ್ನು ಪಡೆಯಬೇಕಿತ್ತು. ಆದರೆ ವೃಂದ ಮತ್ತು ನೇಮಕಾತಿ ನಿಯಮದಡಿ ಈಗ ನೇರ ನೇಮಕಾತಿಗೆ ಅವಕಾಶ ದೊರೆತಿದೆ. ಇದರಿಂದಾಗಿ ಇಲಾಖೆಯಲ್ಲಿ ಇನ್ನಷ್ಟು ಹೆಚ್ಚಿನ ಸುಧಾರಣೆ ತರಲು ಸಾಧ್ಯವಾಗಿದೆ.  ಗ್ರಾಮೀಣ ನೀರು ಪೂರೈಕೆಗೆ ಪ್ರತ್ಯೇಕ ಎಂಜಿನಿಯರಿಂಗ್ ವಿಭಾಗವನ್ನು ರಚಿಸಲಾಗಿದೆ’ ಎಂದರು.

‘ರಾಜ್ಯದಲ್ಲಿ 50 ಲಕ್ಷ ಶೌಚಾಲಯಗಳನ್ನು ನಿರ್ಮಿಸಲು ಸರ್ಕಾರ ಉದ್ದೇಶಿಸಿದ್ದು ಈವರೆಗೆ 34 ಲಕ್ಷ ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಉಳಿದವುಗಳನ್ನು ಇನ್ನು ಎರಡು ವರ್ಷಗಳ ಒಳಗಾಗಿ ನಿರ್ಮಿಸಲಾಗುವುದು’ ಎಂದರು.

ನಿರ್ದೇಶನಾಲಯದ ನಿರ್ದೇಶಕ ಎಂ.ನಾಗೇಂದ್ರ ಸ್ವಾಮಿ ಮಾತನಾಡಿ, ‘ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ರಾಜ್ಯಕ್ಕೆ1,700 ಕೋಟಿ ರೂ ಬಿಡುಗಡೆಯಾಗಿದೆ. ಆದರೆ ಅನೇಕ ಜಿಲ್ಲೆಗಳಲ್ಲಿ ಯೋಜನೆಯ ಸದುಪಯೋಗ ನಡೆದಿಲ್ಲ. ಕೆಲವು ಜಿಲ್ಲೆಗಳಲ್ಲಿ ಶೇ 60ರಷ್ಟು ಹಣ ಕೂಡ ್ಗಳಕೆಯಾಗಿಲ್ಲ’ ಎಂದು ಹೇಳಿದರು.

ಶಾಸಕ ಆರ್. ರೋಷನ್‌ಬೇಗ್ ಮಾತನಾಡಿ, ಎಲ್ಲ ಧರ್ಮಗಳ ಧಾರ್ಮಿಕ ಗುರುಗಳು ಸ್ವಚ್ಛತಾ ಆಂದೋಲನದ ್ಗಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯ ಇದೆ. ಎನ್‌ಜಿಒಗಳು ಸಹ ಸಕ್ರಿಯವಾಗಿ ಶ್ರಮಿಸಬೇಕಿದೆ ಎಂದರು.

ಇಲಾಖೆಯ ಪ್ರಧಾನ ಕಾರ್ಯದರ್ಶಿ ಪಿ. ರವಿಕುಮಾರ್, ಜಾಹೀರಾತು ಮತ್ತು ದೃಶ್ಯ ಪ್ರಚಾರ ನಿರ್ದೇಶನಾಲಯದ ಮಹಾ ನಿರ್ದೇಶಕ ಎ.ಪಿ. ಫ್ರ್ಯಾಂಕ್ ನರೋನ್ಹಾ, ನವಜೀವನ ಮಹಿಳಾ ಪ್ರಗತಿ ಕೇಂದ್ರದ ನಿರ್ದೇಶಕಿ ಸಿಸ್ಟರ್ ಮೇರಿ ಜೇಮ್ಸ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT