ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉದ್ಯೋಗ ಖಾತರಿ ಕೆಲಸಕ್ಕಾಗಿ ರ್ಯಾಲಿ

Last Updated 3 ಫೆಬ್ರುವರಿ 2011, 18:45 IST
ಅಕ್ಷರ ಗಾತ್ರ


ಬೀದರ್: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ಕೊಡುವಂತೆ ಒತ್ತಾಯಿಸಿ ಕೂಲಿ ಕಾರ್ಮಿಕರು ನಗರದಲ್ಲಿ ಗುರುವಾರ ಪ್ರತಿಭಟನಾ ರ್ಯಾಲಿ ನಡೆಸಿದರು.

ನಗರದ ಬೊಮ್ಮಗೊಂಡೇಶ್ವರ ವೃತ್ತದಿಂದ ತಾಲ್ಲೂಕು ಪಂಚಾಯಿತಿ ಕಚೇರಿವರೆಗೆ ರ್ಯಾಲಿ ನಡೆಸಿ ಮನವಿ ಸಲ್ಲಿಸಲಾಯಿತು.ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿರುದ್ಧ ಘೋಷಣೆಗಳನ್ನು ಹಾಕಲಾಯಿತು. ನಂತರ ಮೆರವಣಿಗೆ ಮೂಲಕ ತಹಸೀಲ್ದಾರ್ ಮತ್ತು ಜಿಲ್ಲಾಧಿಕಾರಿ ಕಚೇರಿಗಳಿಗೆ ತೆರಳಿ ಮನವಿ ಸಲ್ಲಿಸಲಾಯಿತು.

ಅಖಿಲ ಭಾರತ ಕಿಸಾನ ಸಭಾ, ಭಾರತೀಯ ಖೇತ್ ಮಜ್ದೂರ್ ಯೂನಿಯನ್, ಅಖಿಲ ಭಾರತ ಯುವಜನ ಒಕ್ಕೂಟಗಳ ಮುಂದಾಳತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪ್ರಮುಖರಾದ ಸಾಯಿಬಣ್ಣಾ ಹಸರಗುಂಡಗಿ, ಬಾಬುರಾವ ಹೊನ್ನಾ, ಪ್ರಕಾಶ ಕುಶನೂರೆ, ಜಗನ್ನಾಥ ಮಹಾರಾಜ, ಮಲ್ಲಿಕಾರ್ಜುನ ಹತ್ತಿ, ಶಂಕರರಾವ ಕಮಠಾಣ, ರಶೀದ್ ಖಾನ್ ಮತ್ತಿತರರು ಪಾಲ್ಗೊಂಡಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT